ಕಲ್ಪ ಮೀಡಿಯಾ ಹೌಸ್ | ಕೋಲ್ಕತ್ತಾ |
ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ಶವವಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಆಘಾತಕಾರಿ ಅಂಶವೊಂದು ಹೊರಬಿದ್ದಿದೆ.
ಈ ಘಟನೆ ಕುರಿತಂತೆ ಸಿಐಡಿ ಅಧಿಕಾರಿಗಳು ನಡೆಸಿದ್ದ ತನಿಖೆಯ ವೇಳೆ ಮಹತ್ವದ ಆಘಾತಕಾರಿ ಅಂಶವೊಂದು ಬಯಲಾಗಿದ್ದು, ದೇಶವೇ ಬೆಚ್ಚಿ ಬಿದ್ದಿದೆ.

Also read: ಗಮನಿಸಿ! ಮೇ 25ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಕಡೆಗಳಲ್ಲಿ ಕರೆಂಟ್ ಇರಲ್ಲ
ಈ ಘಟನೆ ಕುರಿತಂತೆ ಸಿಐಡಿ ತನಿಖೆಯಲ್ಲಿ ಹಲವು ಅಂಶಗಳು ಪತ್ತೆಯಾಗಿವೆ. ಸಂಸದರನ್ನು ಕತ್ತು ಹಿಸುಕಿ, ಚರ್ಮ ಸುಲಿದು ಕತ್ತರಿಸಿ ಹಾಕಲಾಗಿದೆ ಎಂದು ವರದಿಯಾಗಿದೆ.

ಸಿಐಡಿ ಮೂಲಗಳ ಪ್ರಕಾರ, ಕೋಲ್ಕತ್ತಾದ ನ್ಯೂಟೌನ್’ನಲ್ಲಿರುವ ಫ್ಲಾಟ್’ನಲ್ಲಿ ಕೊಲೆ ಮತ್ತು ಸಂಸದರ ದೇಹವನ್ನು ತುಂಡು ತುಂಡಾಗಿಸಿ ವಿಕೃತಿ ಮೆರೆದಿರುವ ಬಗ್ಗೆ ಜಿಹಾದ್ ಹವಾಲ್ದಾರ್ ಒಪ್ಪಿಕೊಂಡಿದ್ದಾನೆ. ಈ ಕೃತ್ಯವನ್ನು ಮಾಡಿರುವ ಕುರಿತು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾನೆ. ಜೊತೆಗೆ ಈ ಹೇಯ ಕೃತ್ಯದ ಹಿಂದಿನ ಮಾಸ್ಟರ್ ಮೈಂಡ್ ಬಾಂಗ್ಲಾದೇಶ್ ಮೂಲದ ಯುಎಸ್ ಪ್ರಜೆ ಅಖ್ತರುಝಾಮಾನ್ ಎಂದು ಹವಾಲ್ದಾರ್ ಬಾಯ್ಬಿಟ್ಟಿದ್ದಾನೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














Discussion about this post