ಕಲ್ಪ ಮೀಡಿಯಾ ಹೌಸ್ | ಕೋಲ್ಕತ್ತಾ |
ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯುವಕನಿಗೆ ಮಂಕಿಪಾಕ್ಸ್ ಸೋಂಕು ತಗುಲಿರುವ ಶಂಕೆಯನ್ನು ವೈದ್ಯರು ವ್ಯಕ್ತಪಡಿಸಿದ್ದಾರೆ.
ಭಾರತದಲ್ಲಿ ಮೊದಲ ಬಾರಿಗೆ ಮಂಕಿಪಾಕ್ಸ್ ಶಂಕಿತ ಪ್ರಕರಣ ವರದಿಯಾಗಿದ್ದು, ಪಶ್ಚಿಮ ಬಂಗಾಳದ ಮಿಡ್ನಾಪುರದ ಯುವಕ ಕೆಲವು ದಿನಗಳ ಹಿಂದೆ ಯುರೋಪಿಯನ್ ದೇಶದಿಂದ ಭಾರತಕ್ಕೆ ಮರಳಿದ್ದ. ಇದೀಗ ಯುವಕನ ದೇಹದಲ್ಲಿ ಕೆಲವು ಗುಳ್ಳೆಗಳು ಹಾಗೂ ರೋಗದ ಲ್ಷಣಗಳು ಕಂಡುಬಂದಿದೆ. ಇದು ಮಂಕಿಪಾಕ್ಸ್ ಇರಬಹುದು ಎಂದು ಶಂಕಿಸಲಾಗುತ್ತಿದೆ.
ಆತನ ರಕ್ತದ ಮಾದರಿಯನ್ನು ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ(ಎನ್‌ಐವಿ)ಗೆ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಇದೀಗ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ. ವರದಿಯ ಬಳಿಕ ಯುವಕನಿಗೆ ಮಂಕಿಪಾಕ್ಸ್ ಇದೆಯೇ ಇಲ್ಲವೇ ಎಂಬುದು ದೃಢವಾಗಲಿದೆ.
Also read: ಶಿವಮೊಗ್ಗದ ಲಯನ್ ಸಫಾರಿಯಲ್ಲಿ ಸಿಂಹ ಸಾವು
ಆತನ ಸಂಪರ್ಕದಲ್ಲಿದ್ದವರು ಹಾಗೂ ಕುಟುಂಬಕ್ಕೆ ಪಶ್ಚಿಮ ಬಂಗಾಳ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದ್ದು, ಆತನನ್ನು ಪ್ರತ್ಯೇಕವಾಗಿ ಇರಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post