ಕಲ್ಪ ಮೀಡಿಯಾ ಹೌಸ್ | ಕೋಲ್ಕತ್ತಾ |
ರೆಮಲ್ ಚಂಡಮಾರುತದಿಂದ #Remel Cyclone ಉಂಟಾದ ಭಾರೀ ಮಳೆಗೆ ಮಿಜೋರಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಕನಿಷ್ಠ 37 ಜನರು ಸಾವನ್ನಪ್ಪಿ, ಹತ್ತಾರು ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ರೆಮಲ್ ಚಂಡಮಾರುತವು ಮಿಜೋರಾಂನ ರಾಜಧಾನಿ ಐಜ್ವಾಲ್‌ನ ಮೆಲ್ತಮ್, ಹ್ಲಿಮೆನ್, ಫಾಲ್ಕಾವ್ನ್ ಮತ್ತು ಸೇಲಂ ವೆಂಗ್ ಪ್ರದೇಶಗಳಲ್ಲಿ 27 ಜನರನ್ನು ಬಲಿ ತೆಗೆದುಕೊಂಡಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಲಾಲ್ದುಹೋಮ ಅವರು, ಮೃತರಿಗೆ ರಾಜ್ಯ ವಿಪತ್ತು ಪರಿಹಾರ ನಿಧಿ (ಎಸ್‌ಡಿಆರ್‌ಎಫ್) 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
Also read: ಪ್ರಜ್ವಲ್ ಹಾಸನದ ಮನೆಗೆ ಎಸ್’ಐಟಿ ತಂಡ | ಹಾಸಿಗೆ, ದಿಂಬು, ಬೆಡ್ ಶೀಟ್ ಕೊಂಡೊಯ್ದಿದ್ದು ಏಕೆ?
ಮಳೆಯಿಂದ ಮನೆಗಳು ಧ್ವಂಸಗೊಂಡು ವಿದ್ಯುತ್ ತಂತಿಗಳು ನೆಲಕ್ಕುರುಳಿವೆ. ನೂರಾರು ಮಂದಿ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆಯುವಂತಾಗಿದೆ. ಮಿಜೋರಾಂನಲ್ಲಿ ಅತಿ ಹೆಚ್ಚಿನ ಪ್ರಮಾಣದ ಹಾನಿಯಾಗಿದೆ. ಪರಿಹಾರ ತಂಡಗಳು ಇದುವರೆಗೆ 27 ಮಂದಿಯ ಮೃತದೇಹಗಳನ್ನು ಹೊರತೆಗೆದಿದ್ದು, ನಗರದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post