ಕಲ್ಪ ಮೀಡಿಯಾ ಹೌಸ್ | ಕೊಲ್ಲೂರು |
ನಟ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ-1 #Kantara-1 ಚಿತ್ರದ ಚಿತ್ರೀಕರಣಕ್ಕೆ ತೆರಳುತ್ತಿದ್ದ ಮಿನಿ ಬಸ್ ಅಪಘಾತಕ್ಕೀಡಾಗಿದ್ದು, ಆರು ಜನರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ.
ಕರಾವಳಿ ಭಾಗದ ವಿವಿಧ ಕಡೆಗಳಲ್ಲಿ ಕಾಂತಾರ-1 ಚಿತ್ರದ ಶೂಟಿಂಗ್ ನಡೆಯುತ್ತಿದೆ. ಮುದೂರು ಬಳಿಯಲ್ಲಿ ಶೂಟಿಂಗ್ ಮುಗಿಸಿ ಕೊಲ್ಲೂರು ಕಡೆ ಹೊರಟಿದ್ದ ಮಿನಿ ಬಸ್’ನಲ್ಲಿ ಸುಮಾರು 20ಕ್ಕೂ ಅಧಿಕ ಜೂನಿಯರ್ ಕಲಾವಿದರು ಇದ್ದರು.

Also read: From being led, India in a position to lead
ಕಾಂತಾರ ಚಿತ್ರ ಭಾರತ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಸೂಪರ್ ಹಿಟ್ ಆಗಿದ್ದು, ಕಾಂತಾರ-1 ಚಿತ್ರದ ಕುರಿತಾಗಿ ಚಿತ್ರ ರಸಿಕರಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿಸಿದೆ. ಈ ಚಿತ್ರವನ್ನು ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿದ್ದು. ಹೊಂಬಾಳೆ ಸಂಸ್ಥೆ ನಿರ್ಮಾಣ ಮಾಡುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post