ಕಲ್ಪ ಮೀಡಿಯಾ ಹೌಸ್ | ಕೊಣಾಜೆ|
ಇಲ್ಲಿನ ಹರೇಕಳ ಕಡವಿನ ಬಳಿ ಸಮೀಪದ ನೇತ್ರಾವತಿ ನದಿಯಲ್ಲಿ #Nethravathi River ತಾಯಿ ಮತ್ತು ಒಂದು ವರ್ಷದ ಮಗುವಿನ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಮೃತ ಮಹಿಳೆಯನ್ನು ಚೈತ್ರ(30) ಎಂದು ಗುರುತಿಸಲಾಗಿದೆ.
ಅಡ್ಯಾರ್ ನಿವಾಸಿಯಾದ ಮಹಿಳೆ ತನ್ನ ಒಂದು ವರ್ಷದ ಮಗು ದಿಯಾಂಶ್ ಜತೆ ಮಧ್ಯಾಹ್ನ ಸೇತುವೆಯ ಮೂಲಕ ನಡೆದುಕೊಂಡು ಬಂದು ಹರೇಕಳ ಕಡವಿನಬಳಿ ಬಂದಿದ್ದರು ಎನ್ನಲಾಗಿದೆ.
Also read: ಏಪ್ರಿಲ್ 1ರಂದು ಶಿವಮೊಗ್ಗದಲ್ಲಿ ಬಿಜೆಪಿ ಬೂತ್ ಸಮಿತಿಯ ಕಾರ್ಯಕರ್ತರ ಸಮಾವೇಶ | ಡಾ. ಧನಂಜಯ ಸರ್ಜಿ
ನದಿಯ ಸಮೀಪ ನಡೆದುಕೊಂಡು ಹೋಗುವುದನ್ನು ಸ್ಥಳೀಯರು ಗಮನಿಸಿದ್ದರು ಎನ್ನಲಾಗಿದೆ. ಆದರೆ ಮಧ್ಯಾಹ್ನ ಬಳಿಕ ಆಕೆಯ ಮನೆಯವರು ಬಂದು ವಿಚಾರಿಸಿದ್ದು, ಆ ಬಳಿಕ ಮಹಿಳೆ ನಾಪತ್ತೆಯಾಗಿರುವ ಬಗ್ಗೆ ತಿಳಿದಿತ್ತು.
ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ರಾತ್ರಿ 8.30ರ ವೇಳೆಗೆ ಹರೇಕಳ ನೇತ್ರಾವತಿ ನದಿಯಲ್ಲಿ ತಾಯಿ ಮಗುವಿನ ಶವ ಪತ್ತೆಯಾಗಿದೆ. ಮಹಿಳೆಯು ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post