ಕಲ್ಪ ಮೀಡಿಯಾ ಹೌಸ್ | ಕೂನೂರು |
ತಮಿಳುನಾಡಿನ ಕೂನೂರು ಅರಣ್ಯ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಸೇನಾ ಹೆಲಿಕಾಪ್ಟರ್ ಪತನಗೊಂಡ ದುರಂತದಲ್ಲಿ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪತ್ನಿ ಮಧುಲಿಕಾ ಸೇರಿ ಮೃತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ಸೇನಾ ಕಾಲೇಜಿನ ಸೆಮಿನಾರ್’ನಲ್ಲಿ ಉಪನ್ಯಾಸ ನೀಡುವ ಸಲುವಾಗಿ ದೆಹಲಿಯಿಂದ ಕೊಯಂಬತ್ತೂರಿಗೆ ಸೇನಾ ಹೆಲಿಕಾಪ್ಟರ್’ನಲ್ಲಿ ರಾವತ್, ಅವರ ಪತ್ನಿ ಹಾಗೂ ಅಧಿಕಾರಿಗಳು ಸೇರಿ 14 ಮಂದಿ ಪ್ರಯಾಣಿಸುತ್ತಿದ್ದರು. ಆದರೆ, ಕೂನೂರು ಅರಣ್ಯ ಪ್ರದೇಶದಲ್ಲಿ ಚಾಪ್ಟರ್ ಪತನಗೊಂಡಿದ್ದು, ರಾವತ್ ಅವರ ಸ್ಥಿತಿ ಸದ್ಯ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಇನ್ನು, ಘಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ತುರ್ತು ಸಂಪುಟ ಸಭೆ ನಡೆಸಲಾಗಿದ್ದು, ರಕ್ಷಣಾ ಸಚಿವ ರಾಜನಾಥ ಸಿಂಗ್ ರಾವತ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಘಟನೆ ಹಾಗೂ ರಾವತ್ ಅವರ ಕುರಿತಾಗಿ ರಾಜನಾಥ ಸಿಂಗ್ ಅವರು ನಾಳೆ ಅಧಿಕೃತ ಹೇಳಿಕೆ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post