ಕಲ್ಪ ಮೀಡಿಯಾ ಹೌಸ್ | ಕೊಪ್ಪಳ |
ನಗರಸಭೆ ಕಾರ್ಯಾಲಯ ಸೇರಿ ಒಟ್ಟು ಐದು ಕಡೆ ಲೋಕಾಯುಕ್ತ ಪೋಲಿಸರು ದಾಳಿ ನಡೆಸಿ ಶಾಕ್ ನೀಡಿದ್ದಾರೆ.
ಕೊಪ್ಪಳ ಲೋಕಾಯುಕ್ತ ಡಿವೈಎಸ್ಪಿ ವಸಂತಕುಮಾರ್ ನೇತೃತ್ವದಲ್ಲಿ ಅಧಿಕಾರಿಳ ತಂಡ, ನಗರಸಭೆ ಜಿಇ ಸೋಮಲಿಂಗಪ್ಪ, ಕಂದಾಯ ಅಧಿಕಾರ ಉಜ್ಚಲ, ನಗರಸಭೆ ಅಧ್ಯಕ್ಷನ ಸಹೋದರ ಮತ್ತು ಗುತ್ತಿಗೆದಾರರಾದ ಶಕೀಲ ಪಟೇಲ್ ಮತ್ತು ಪ್ರವೀಣ ಕಂದಾರಿ ಎಂಬುವವರ ಮನೆಯ ಮೇಲೆ ದಾಳಿ ನಡೆಸಿದೆ.
ವ್ಯಾಪಕ ಭ್ರಷ್ಟಾಚಾರ ನಡೆಸಲಾಗಿದೆ ಎಂಬ ದೂರಿನ ಆದಾರದ ಮೇಲೆ ಈ ದಾಳಿ ನಡೆಸಲಾಗಿದೆ.
2023-24 ನೆಯ ಸಾಲಿನ ನಗರಸಭೆಯ ಅನುದಾನದಲ್ಲಿ ದುರ್ಬಳಕೆ, 336 ಕಾಮಗಾರಿಗಳಲ್ಲಿ ಸುಮಾರು 10 ಕೋಟಿ ರೂಪಾಯಿ ದುರ್ಬಳಕೆ ಮತ್ತು ಅರ್ಧ ಕಾಮಗಾರಿ ಮಾಡಿರುವುದು, ಕಾಮಗಾರಿ ಮಾಡದೆ ಹಣ ಪಡೆದುಕೊಂಡಿರುವ ಆರೋಪಗಳು ಕೇಳಿಬಂದಿದ್ದವು. ಇದರ ಹಿನ್ನೆಲೆಯಲ್ಲಿ ಲೋಕಾಯಕ್ತ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post