ಕಲ್ಪ ಮೀಡಿಯಾ ಹೌಸ್ | ಕೊಪ್ಪಳ |
ಗಲಭೆ ಸಂಬಂಧ ಕೆಜೆ ಹಳ್ಳಿ ಪೊಲೀಸರ ವಶದಲ್ಲಿರುವ ಕೊಪ್ಪಳ ಜಿಲ್ಲಾಧ್ಯಕ್ಷ ಸುಮಾರು 5-6 ಬ್ಯಾಂಕ್ ಖಾತೆಗಳನ್ನು ಹೊಂದಿದ್ದು, ಲಕ್ಷಾಂತರ ರೂ. ಹಣ ವರ್ಗಾವಣೆಯಾಗಿರುವ ಕುರಿತಾಗಿ ವರದಿಯಾಗಿದೆ.
ಕೆಜೆ ಹಳ್ಳಿ ಗಲಭೆ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು, ಈತನ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ ಎಂದು ಹೇಳಲಾಗಿದ್ದು, ಹಲವು ಬ್ಯಾಂಕ್’ಗಳಿಗೆ ನೋಟೀಸ್ ನೀಡಲಾಗಿದೆ ಎನ್ನಲಾಗಿದೆ.
ಖಾಸಗಿ ಫೈನಾನ್ಸ್’ನಲ್ಲಿ ಕೆಲಸ ಮಾಡಿಕೊಂಡಿದ್ದ ಈತ ಸುಮಾರು 5-6 ಬ್ಯಾಂಕ್ ಖಾತೆಗಳನ್ನು ಹೊಂದಿದ್ದು, ಲಕ್ಷಾಂತರ ರೂ. ಹಣ ವರ್ಗಾವಣೆಯಾಗಿದೆ. ಅನಾಮಧೇಯ ವ್ಯಕ್ತಿಗಳೊಂದಿಗೆ ವ್ಯವಹಾರ ನಡೆಸಿರುವ ಕುರಿತಾಗಿ ಮಾಹಿತಿಯಿದ್ದು, ಈ ಕುರಿತು ಹಣದ ಮೂಲವನ್ನು ಜಾಲಾಡುತ್ತಿದ್ದಾರೆ ಎಂದು ವರದಿಯಾಗಿದೆ.
Also read: ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆಗೆ ಸಚಿವ ಎಸ್.ಟಿ. ಸೋಮಶೇಖರ್ ಚಾಲನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post