ಕಲ್ಪ ಮೀಡಿಯಾ ಹೌಸ್ | ಕೊಪ್ಪಳ/ಬೆಂಗಳೂರು |
ಕೊಪ್ಪಳದ ಕಿರ್ಲೋಸ್ಕರ್ ಫೆರಸ್ ಕಾರ್ಖಾನೆಯು ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆ ಗುರುತಿಸಿ ಸಿಎಸ್‌ಆರ್ ಎಕ್ಸ್‌ಲೆನ್ಸ್ ಪ್ರಶಸ್ತಿಯನ್ನು ನೀಡಲಾಗಿದೆ. ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷರಾದ ಶ್ರೀ ಪಿ. ನಾರಾಯಣ ಈ ಪ್ರಶಸ್ತಿಯನ್ನು ಸ್ವೀಕರಿಸಿದರು.
ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೃತ್ತಿನಿರತರು ಜೊತೆಗೂಡಿ ಸ್ಥಾಪಿಸಿದಂತಹ, ಕನ್ನಡಪರ ಕಾಳಜಿ ಇರುವ ನಿರಾತಂಕ ಸಂಸ್ಥೆಯು ಬೆಂಗಳೂರಿನ ಹೊಟೇಲ್ ಚಾನ್ಸರಿ ಪೆವಿಲಿಯನ್‌ನಲ್ಲಿ ಆಯೋಜಿಸಿದ್ದ ಆರನೇ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪಿ. ನಾರಾಯಣ ಇವರು ಕಿರ್ಲೋಸ್ಕರ್ Kirloskar ಕಾರ್ಖಾನೆಯು ಕೇವಲ ಉತ್ಪಾದನೆಗೆ ಸೀಮಿತಗೊಳಿಸದೇ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆಯನ್ನು ಯಶಸ್ವಿಯಾಗಿ ನಿಭಾಯಿಸಿಕೊಂಡು ಬರುತ್ತಿದೆ. ಇನ್ನೂ ಈ ದಿಶೆಯಲ್ಲಿ ಹೆಚ್ಚಿನ ಚಟುವಟಿಕೆಗಳನ್ನು ಕೈಗೊಳ್ಳಬೇಕಾಗಿದೆ ಎಂದು ತಿಳಿಸಿದರು.
Also read: ಪಾಠದ ಜೊತೆಗೆ ಆಟವಿದ್ದರೆ ಮಾತ್ರ ಮಾನಸಿಕ, ದೈಹಿಕ ಬೆಳವಣಿಗೆ ಸಾಧ್ಯ: ಪ್ರಕಾಶ್ ಕಾರಂತ
ಸಮ್ಮೇಳನಾಧ್ಯಕ್ಷ ಕವಿ ಪ್ರೊ. ಎಚ್.ಎಸ್. ವೆಂಕಟೇಶಮೂರ್ತಿ, ಮುಖ್ಯ ಅತಿಥಿಗಳಾಗಿ ಹಿರಿಯ ರಂಗಕರ್ಮಿ ಹಾಗೂ ಚಲನಚಿತ್ರ ನಿರ್ದೇಶಕ ಟಿ.ಎಸ್.ನಾಗಾಭರಣ ಮತ್ತು ಕರ್ನಾಟಕ ಉಚ್ಛ ನ್ಯಾಯಾಲಯದ ಹಿರಿಯ ವಕೀಲ ಎಸ್.ಎನ್. ಮೂರ್ತಿ ಉಪಸ್ಥಿತರಿದ್ದರು. ಹಾಗೂ ರಾಜ್ಯಾದ್ಯಂತ ಇರುವ ಕಂಪನಿಗಳ ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿಗಳು ಭಾಗವಹಿಸಿದ್ದರು.
ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಅಪಾರ ಅನುಭವ ಇರುವ ಹಿರಿಯ ಮಾನವ ಸಂಪನ್ಮೂಲ ಕಾರ್ಯ ನಿರ್ವಾಹಕರನ್ನು ಸಂದರ್ಶಿಸಿ, ಅವರ ಅನುಭವಗಳನ್ನು ಲೀಡರ್‍ಸ್ ಟಾಕ್ ಎಂಬ ಪುಸ್ತಕದಲ್ಲಿ ಪ್ರಕಟಿಸಿದ್ದು, ಅದನ್ನು ಈ ಸಮಾರಂಭದಲ್ಲಿ ಬಿಡುಗಡೆ ಮಾಡಲಾಯಿತು.
ಕಿರ್ಲೋಸ್ಕರ್ ಫೆರಸ್ ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಪಿ. ನಾರಾಯಣ ಇವರನ್ನು ಸಂದರ್ಶಿಸಿದ್ದು, ಹಂಚಿಕೊಂಡ ಇವರ ಅನುಭವವನ್ನು ಈ ಪುಸ್ತಕದಲ್ಲಿ ಪ್ರಕಟಿಸಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post