ಕಲ್ಪ ಮೀಡಿಯಾ ಹೌಸ್ | ಅಪರಾಧ ಸುದ್ದಿ |
ಗಂಗಾವತಿ ಬೈಕ್’ನಲ್ಲಿ ಬರುತ್ತಿದ್ದ ವೇಳೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್(31) ಎನ್ನುವವರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಲೀಲಾವತಿ ಎಲುಬು ಕೀಲು ಆಸ್ಪತ್ರೆಯ ಮುಂದೆ ಕಳೆದ ತಡರಾತ್ರಿ ಈ ಘಟನೆ ನಡೆದಿದ್ದು, ದೇವಿ ಕ್ಯಾಂಪ್’ನಿಂದ ಬೈಕ್’ನಲ್ಲಿ ಬರುವಾಗ ಘಟನೆ ನಡೆದಿದೆ.
ಹೇಗಾಯ್ತು ಘಟನೆ?
ದೇವಿಕ್ಯಾಂಪ್’ನಿಂದ ಗಂಗಾವತಿಗೆ ವೆಂಕಟೇಶ್ ಅವರು ಸ್ನೇಹಿತರ ಜೊತೆ ಊಟ ಮಾಡಿ ಬೈಕಿನಲ್ಲಿ ಬರುತ್ತಿದ್ದರು. ಅವರನ್ನು ಹಿಂಬಾಲಿಸಿಕೊAಡು ಬಂದಿದ್ದ ಗ್ಯಾಂಗ್ ಸದಸ್ಯರು ಬೈಕಿಗೆ ಗುದ್ದಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಇನ್ನು, ವೆಂಕಟೇಶ ಕೊಲೆ ಮಾಡಲು ಆರೋಪಿಗಳು ಬಳಕೆ ಮಾಡಿದ ಟಾಟಾ ಇಂಡಿಕಾ ಕಾರು ಗಂಗಾವತಿಯ ಎಚ್’ಆರ್’ಎಸ್ ಕಾಲೋನಿಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಆರೋಪಿಗಳು ಬೆಂಗಳೂರು ಪಾಸಿಂಗ್ ಇರುವ ಕಾರು ಬಳಕೆ ಮಾಡಿದ್ದು, ಕಾರ್ ಟೈರ್ ಬ್ಲಾಸ್ಟ್ ಆಗಿದ್ದರಿಂದ ಕಾರು ಅಲ್ಲೆ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸದ್ಯ ಕಾರಿನಲ್ಲಿ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, ಸ್ಥಳಕ್ಕೆ ಬೆರಳಚ್ಚು, ಶ್ವಾನದಳ ತಂಡದೊಂದಿಗೆ ತನಿಖೆ ಮುಂದುವರೆದಿದೆ.
ಘಟನಾ ಸ್ಥಳಕ್ಕೆ ಧಾವಿಸಿರುವ ಡಿವೈಎಸ್’ಪಿ ಸಿದ್ದನಗೌಡ ಪಾಟೀಲ್ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post