ಕಲ್ಪ ಮೀಡಿಯಾ ಹೌಸ್ | ಕೊಪ್ಪಳ |
ಕೊಪ್ಪಳ ತಾಲೂಕಿನ ಗ್ರಾಮದ 8ನೇ ತರಗತಿ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಮೂವರು ಅತ್ಯಾಚಾರ ನಡೆಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಈ ಸಂಬಂಧ ಬಾಲಕಿಯ ಪೋಷಕರು ಕೊಪ್ಪಳ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.
ಅತ್ಯಾಚಾರದ ಬಳಿಕ ಬಾಲಕಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಆಕೆಯ ದೈಹಿಕ ಬದಲಾವಣೆ ಕಂಡು ಪೋಷಕರು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















