ಕಲ್ಪ ಮೀಡಿಯಾ ಹೌಸ್ | ಕೊಪ್ಪಳ |
ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ, ಬಟಾಬಯಲು ಎಂದು ಮುಖ್ಯಮಂತ್ರಿಗಳು Karnataka Chief Minister ತಿರುಗೇಟು ನೀಡಿದರು.
ಬಿಜೆಪಿ ಮನೆಯೊಂದು ಮೂರು ಬಾಗಿಲು ಎಂಬ ಶಾಸಕ ಪ್ರಿಯಾಂಕ ಖರ್ಗೆ MLA Priyanka Karge ಅವರ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದರು.
ಅವರು ಇಂದು ಕೊಪ್ಪಳದ ಗಿಣಿಗೇರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಸರ್ವೋಚ್ಚ ನಾಯಕರು. ಅವರನ್ನು ಮುಂದಿಟ್ಟುಕೊಂಡೇ ಎಲ್ಲಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಅವರ ಆಶೀರ್ವಾದ ನಮಗಿದೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದಾರೆ ಎಂದರು.
Also read: ರಾಜ್ಯ ಅಡಿಕೆ ಬೆಳೆಗಾರರ ಪರ ಸಂಸತ್’ನಲ್ಲಿ ಗಮನ ಸೆಳೆದ ಸಂಸದ ರಾಘವೇಂದ್ರ ಹೇಳಿದ್ದೇನು?
ತಮ್ಮ ಹಾಗೂ ಯಡಿಯೂರಪ್ಪ ಅವರ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಮ್ಮದು ತಂದೆ ಮಕ್ಕಳ ಸಂಬಂಧ. ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಅದು ಬರುವುದಿಲ್ಲ. ನಿರೀಕ್ಷೆ ಮಾಡುವವರಿಗೆ ನಿರಾಸೆಯಾಗುತ್ತದೆ ಎಂದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post