ಕಲ್ಪ ಮೀಡಿಯಾ ಹೌಸ್ | ಕೊಪ್ಪಳ |
ಮಾನವ ತಪ್ಪುಗಳಿಂದಲೇ ಅಪಘಾತಗಳು ಸಂಭವಿಸುತ್ತವೆ. ಅಮಾಯಕರು ಜೀವ ಕಳೆದುಕೊಂಡು ಅವಲಂಬಿಸಿರುವವರನ್ನು ಬೀದಿಪಾಲು ಮಾಡುತ್ತಾರೆ. ಚಾಲಕರು ವಾಹನದಲ್ಲಿ ಕುಳಿತ ಕೂಡಲೇ ತಮ್ಮ ಕುಟುಂಬ ಮತ್ತು ಅವಲಂಬಿತರನ್ನು ನೆನಪಿಸಿಕೊಳ್ಳಬೇಕು. ಎಲ್ಲಕ್ಕಿಂತ ಜೀವ ಮುಖ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕಾರ್ಖಾನೆಯ ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಸಂಯೋಜಕ ಉಪಾಧ್ಯಕ್ಷ ಪಿ. ನಾರಾಯಣ ಹೇಳಿದರು.
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ Kirloskar Ferrous Industries Ltd ಕಾರ್ಖಾನೆಯ ಆವರಣದಲ್ಲಿ “ಸ್ವಚ್ಛತಾ ಪಖ್ವಾದ” ಅಡಿಯಲ್ಲಿ ಜ.17ರವರೆಗೆ ನಡೆಯಲಿರುವ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ರಸ್ತೆ ಸುರಕ್ಷತಾ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕುಡಿದು ವಾಹನ ಚಾಲನೆ ಮಾಡುವುದು, ಮೊಬೈಲ್‍ನಲ್ಲಿ ಮಾತನಾಡುತ್ತಾ ಚಾಲನೆ ಮಾಡುವುದನ್ನು ಕಡ್ಡಾಯವಾಗಿ ನಿಲ್ಲಿಸಬೇಕು ಚಾಲಕರು ರಸ್ತೆ ನಿಯಮಗಳನ್ನು ಹಾಗೂ ಸಂಚಾರ ಚಿಹ್ನೆಗಳನ್ನು ಚೆನ್ನಾಗಿ ಅರಿತುಕೊಳ್ಳಬೇಕು ಎಂದರು.
Also read: ದಕ ಜಿಲ್ಲಾ ಜನತಾದಳ ಹಿರಿಯ ಮುಖಂಡ ಸುಶೀಲ್ ನರೋಹ್ನ ನಿಧನ

ಸುರಕ್ಷತಾ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಸುರಕ್ಷತಾ ನೆಡಿಗೆಯಲ್ಲಿ ಬೀಡು ಕಬ್ಬಿಣ ವಿಭಾಗದ ಸಂಯೋಜಕ ಉಪಾಧ್ಯಕ್ಷ ಎಂ.ಜಿ. ನಾಗರಾಜ್, ಹಿರಿಯ ಮತ್ತು ಕಿರಿಯ ಅಧಿಕಾರಿಗಳು, ಗುತ್ತಿಗೆದಾರರು, ಕಾರ್ಮಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಇದೇ ಸಂದರ್ಭದಲ್ಲಿ ಪ್ರಾಜೆಕ್ಟ್ ಕಾರ್ಮಿಕರು ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ನಾಟಕ ಪ್ರದರ್ಶನ ಮಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post