ಕಲ್ಪ ಮೀಡಿಯಾ ಹೌಸ್ | ಕೊಪ್ಪಳ |
ಜೈಶ್ರೀರಾಮ್ #Jai Shriram ಎಂದು ಘೋಷಣೆ ಕೂಗಿದ್ದಕ್ಕಾಗಿ ಯುವಕನ ಮೇಲೆ ಗುಂಪೊAದು ಹಲ್ಲೆ ನಡೆಸಿರುವ ಘಟನೆ ನಗರದಲ್ಲಿ ನಡೆದಿದೆ.
ಗಂಗಾವತಿಯ ಶ್ರೀರಾಮನಗರದ ಸನ್ ಶೈನ್ ಬಾರ್’ನಲ್ಲಿ ನಿನ್ನೆ ಮಂಗಳವಾರ ರಾತ್ರಿ ಮದ್ಯ ಸೇವನೆಯ ವೇಳೆ ಕುಮಾರ್ ರಾಠೋಡ್ ಎಂಬಾತ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದನು. ಇದನ್ನು ಕೇಳಿಸಿಕೊಂಡ ಅಲ್ಲಿದ್ದ ಯುವಕರು ಏಕಾಏಕಿ ಒಳಗೆ ನುಗ್ಗಿ ಬಂದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಯಲ್ಲಿ ಗಾಯಗೊಂಡ ಕುಮಾರ್ ರಾಠೋಡನನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.
Also read: ಎನ್’ಡಿಎಗೆ 28 ಸ್ಥಾನ ಗೆಲ್ಲಿಸಿದರೆ ಮೋದಿ ಕೈ ಹಿಡಿದು ಈ ಯೋಜನೆಗೆ ಸಹಿ ಹಾಕಿಸುತ್ತೇನೆ: ದೇವೇಗೌಡ ಭರವಸೆ
ಬೆಂಗಳೂರಿನಲ್ಲಿ ಮೊನ್ನೆ ರಾಮ ನವಮಿ #Ramanavami ದಿನ ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ನಡೆದಿತ್ತು. ಇದರ ಬೆನ್ನಲ್ಲೇ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕೂಡ ಅಂಥದ್ದೇ ಘಟನೆ ವರದಿಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post