ಕಲ್ಪ ಮೀಡಿಯಾ ಹೌಸ್ | ಕೊಪ್ಪಳ |
ಮಕ್ಕಳಿಗೆ ಶಿಕ್ಷಣ ಅತ್ಯಂತ ಪ್ರಮುಖವಾಗಿದ್ದು, ಈ ಶಿಕ್ಷಣ ವ್ಯವಸ್ಥೆಯನ್ನು ಪಡೆಯಲು ವಿಧ್ಯಾರ್ಥಿಗಳು ಆರೋಗ್ಯವಂತರಾಗಿರಬೇಕು, ಈ ನಿಟ್ಟಿನಲ್ಲಿ ನಮ್ಮ ಟ್ರಸ್‌ಟ್‌ವತಿಯಿಂದ ಇಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದೇವೆ ಎಂದು ಕಿರ್ಲೋಸ್ಕರ್ Kirloskar ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಪ್ರಧಾನ ವ್ಯವಸ್ಥಾಪಕ ಬಿ. ಚಂದ್ರಶೇಖರ್ ತಿಳಿಸಿದರು.
ಕಿರ್ಲೋಸ್ಕರ್ ಕಾರ್ಖಾನೆಯು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆಯ ಅಂಗವಾಗಿ ಕೊಪ್ಪಳದ ಸೆಕ್ಯೂರ್ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ತಾಲ್ಲೂಕಿನ ಶಹಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಶಾಲೆಯ ಮುಖ್ಯೋಪಾಧ್ಯಾಯ ದೇವರಾಜ್ ಮಾತನಾಡಿ, ಕಿರ್ಲೋಸ್ಕರ್ ಕಾರ್ಖಾನೆಯು ಸಿಎಸ್‌ಆರ್ ಉಪಕ್ರಮದ ಅಡಿಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಸಾರ್ವಜನಿಕರು ಮತ್ತು ಶಾಲಾ ಮಕ್ಕಳು ಇದರ ಪ್ರಯೋಜನವನ್ನು ಪಡೆಯುತ್ತಿದ್ದಾರೆ ಎಂದು ಪ್ರಶಂಸಿದರು.
Also read: ಗುಣಮಟ್ಟ, ದರ ಪರಿಶೀಲನೆ ನಂತರ ರ‍್ಯಾಪಿಡ್ ರಸ್ತೆ ಪರಿಗಣನೆ: ಸಿಎಂ ಬೊಮ್ಮಾಯಿ
ಈ ಶಿಬಿರದಲ್ಲಿ ಸೆಕ್ಯೂರ್ ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾಕ್ಟರ್ ಶಾಹೀದಾ ಬೇಗಂ, ಶೀಲಾ ಆರಕೇರಿ ಮತ್ತು ದಂತವೈದ್ಯರಾದ ಶ್ರೀಲೇಖಾ ಭಾಗವಹಿಸಿದ್ದು, ಮಕ್ಕಳ ಆರೋಗ್ಯ ತಪಾಸಣೆಯನ್ನು ಮಾಡಿದರು.
ಈ ಸಂದರ್ಭದಲ್ಲಿ ಕಿರ್ಲೋಸ್ಕರ್ ಕಾರ್ಖಾನೆಯ ವೈದ್ಯಾಧಿಕಾರಿಗಳಾದ ಡಾಕ್ಟರ್ ಪ್ರವೀಣ್‌ಕುಮಾರ್, ಗ್ರಾಮ ಪಂಚಾಯತಿ ಸದಸ್ಯರಾದ ನಿಂಗಜ್ಜ ಚೌಧರಿ, ಮುರಳೀಧರ ಬಸಿರಾಳ್, ನಾಗರಾಜ ಬಾದರಬಂಡಿ, ಹಾಲಪ್ಪ ಮುತ್ಯಾಲ್, ಶಾಲಾ ಮುಖ್ಯೋಪಧ್ಯಾಯರಾದ ದೇವರಾಜ್ ಮತ್ತು ಗ್ರಾಮದ ಹಿರಿಯ ಮುಖಂಡರುಗಳು, ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು. ಸುಮಾರು 400 ಶಾಲಾ ವಿದ್ಯಾರ್ಥಿಗಳು ಈ ಶಿಬಿರದ ಪ್ರಯೋಜನವನ್ನು ಪಡೆದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post