ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಕೊಪ್ಪಳ: ಮನುಷ್ಯನ ಬದುಕಿಗೆ ಕಣ್ಣುಗಳು ಅವಶ್ಯಕವಾಗಿದ್ದು, ಅವುಗಳನ್ನು ಕಾಲ ಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಹೊಸಪೇಟೆ ಐದೃಷ್ಠಿ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞರಾದ ಡಾ. ಕಿರಣ್ ಕುಮಾರ್ ಹೇಳಿದರು.
ಜಿಲ್ಲೆಯ ಶಾಹಪುರ ಗ್ರಾಮದ ಸರ್ಕಾರಿ ಶಾಲೆಯ ಮೈದಾನದಲ್ಲಿ ಹೊಸಪೇಟೆ ಐ ದೃಷ್ಟಿ ನೇತ್ರ ಚಿಕಿತ್ಸಾಲಯದ ಸಹಾಯದೊಂದಿಗೆ ಕಿರ್ಲೋಸ್ಕರ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.

ಚಂದ್ರಶೇಖರ್ ಅವರು ಮಾತನಾಡಿ, ಜೀವನದ ಎಲ್ಲ ಚಟುವಟಿಕೆಗಳಿಗೆ ಮೂಲ ಕಣ್ಣು. ಆ ಕಣ್ಣಿನ ಬಗ್ಗೆ ಕಾಳಜಿ ವಹಿಸುವುದು ಬಹುಮುಖ್ಯವಾಗಿದೆ. ಹೊರ ಜಗತ್ತನ್ನು ನೋಡಿ ಆನಂದಿಸಬೇಕಾದರೆ ಕಣ್ಣನ್ನು ಜೋಪಾನವಾಗಿ ಕಾಪಾಡಿಕೊಳ್ಳಬೇಕು ಎಂದರು.

ಪ್ರತಿ ವರ್ಷವೂ ಕಾರ್ಖಾನೆಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಧಾರ್ಮಿಕ , ಶಿಕ್ಷಣ ,ಆರೋಗ್ಯ ಮತ್ತು ಸಾಮಾಜಿಕ ಸೇವೆಗಳನ್ನು ಕಿರ್ಲೋಸ್ಕರ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ನೆರವೇರಿಸುತ್ತ ಬಂದಿದೆ. ಕೊರೋನಾ ಹಿನ್ನಲೆಯಲ್ಲಿ ಅನೇಕ ಕೆಲಸಗಳು ಹಿನ್ನಡೆಯಾದರೂ ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚಿನ ಒಲವನ್ನು ತೋರಿಸಿ ಆರೋಗ್ಯ ಸುಧಾರಣಾ ಮತ್ತು ಕೊವೀಡ್ ಸುಧಾರಣ ಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ವೈದ್ಯಾಧಿಕಾರಿ ಡಾ. ಪ್ರವೀಣ್ ಕುಮಾರ್, ಸಿನಿಯರ್ ಮ್ಯಾನೇಜರ್ ರವಿಕುಮಾರ್, ದೇವರಾಜ್, ತಿಪ್ಪೇಸ್ವಾಮಿ ಮತ್ತು ಬೇವಿನಹಳ್ಳಿ, ಲಿಂಗದ ಹಳ್ಳಿ, ಶಾಹಾಪುರ ಮತ್ತು ಸುತ್ತಮುತ್ತಲಿನ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ವರದಿ: ಮುರಳೀಧರ್ ನಾಡಿಗೇರ್, ಕೊಪ್ಪಳ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post