No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಕಾರ್ಖಾನೆಯಲ್ಲಿ ಕನ್ನಡ ರಾಜ್ಯೋತ್ಸವ…

kalpa News by kalpa News
November 1, 2021
in ಕೊಪ್ಪಳ
0
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಕಾರ್ಖಾನೆಯಲ್ಲಿ ಕನ್ನಡ ರಾಜ್ಯೋತ್ಸವ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ  |

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ 66ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದೊಂದಿಗೆ ಆಚರಿಸಲಾಯಿತು.

ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಆರ್. ವಿ. ಗುಮಾಸ್ತೆಯವರು ಧ್ವಜಾರೋಹಣ ಮಾಡುವುದರ ಮೂಲಕ ಎಲ್ಲರಿಗೂ ಶುಭಾಶಯಗಳು ಕೋರಿದರು.

ಪ್ರಾರಂಭದಲ್ಲಿ ಕಳೆದ ಮೂರು ದಿನಗಳ ಹಿಂದೆ ನಿಧನ ಹೊಂದಿದ ಕನ್ನಡದ ಮೇರುನಟ ದಿವಂಗತ ಡಾ. ರಾಜಕುಮಾರ ಅವರ ಪುತ್ರ ನಟ ಪುನೀತ್ ರಾಜಕುಮಾರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಆರ್. ವಿ. ಗುಮಾಸ್ತೆ ಅವರು ಸಭೆಯನ್ನುದ್ದೇಶಿಸಿ ಮಾತನಾಡಿ, ಕಾರ್ಖಾನೆಯ ಅಭಿವೃದ್ಧಿಯಲ್ಲಿ ತಮ್ಮ ಶ್ರಮ ಹೆಚ್ಚಾಗಿದ್ದು, ಮುಂದಿನ ದಿನದಲ್ಲಿ ಹೆಚ್ಚಿನ ಮಟ್ಟದಲ್ಲಿ ಸ್ಪರ್ಧೆ ಇರುತ್ತದೆ. ದಿವಂಗತ ಸರ್. ಎಂ. ವಿಶ್ವೇಶ್ವರಯ್ಯ ನವರು ಹಾಕಿಕೊಟ್ಟ ಮಾರ್ಗದಲ್ಲಿ ಮುಂದುವರೆಯಬೇಕಾಗಿದೆ. ಈ ಸಂದರ್ಭದಲ್ಲಿ ಕನ್ನಡ ನಾಡಿಗೆ ಶ್ರಮಿಸಿದ ದಿಗ್ಗಜರನ್ನು ನೆನೆಯುತ್ತ ಕೆಲಸ ನಿರ್ವಹಿಸಬೇಕು ಎಂದು ಅನೇಕ ಬಾರಿ ಸರ್. ಎಂ. ವಿಶ್ವೇಶ್ವರಯ್ಯನವರನ್ನು ನೆನೆದು ಅವರ ಕೆಲಸ ಕಾರ್ಯವನ್ನು ಸ್ಮರಿಸಿ ಶುಭಾಶಯವನ್ನು ಕೋರಿದರು.


ಕಾರ್ಯಕ್ರಮದಲ್ಲಿ ಅನೇಕ ಉದ್ಯೋಗಿಗಳು ಮತ್ತು ಗುತ್ತಿಗೆ ಕೆಲಸಗಾರರಿಗೆ ಅವರ ಸೇವೆಯನ್ನು ಮೆಚ್ಚಿ ಬಹುಮಾನವನ್ನು ನೀಡಲಾಯಿತು.

ಕರ್ನಾಟಕ ರಾಜ್ಯ ರೂಪುಗೊಂಡಾಗ ಒಟ್ಟು 19 ಜಿಲ್ಲೆಗಳನ್ನು ಒಳಗೊಂಡಿತ್ತು. ಈಗ ಅದು 31 ಜಿಲ್ಲೆಯಾಗಿ ರೂಪುಗೊಂಡಿದ್ದು, ಎಲ್ಲೆಡೆಯೂ ಕನ್ನಡ ರಾಜ್ಯೋತ್ಸವ / ಕರ್ನಾಟಕ ರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚುನಾವಣಾ ಸಮಯದಲ್ಲಿ ಪ್ರಥಮ ಆದ್ಯತೆಯಾಗಿ ಆಶ್ವಾಸನೆ ನೀಡಿದಂತೆ ನೂತನ ವಿಜಯನಗರ ಜಿಲ್ಲೆ ಮಾಡುವ ಕನಸು ನನಸಾಗಿಸಿದ್ದರಿಂದ ಇಂದು ವಿಜಯನಗರ ಜಿಲ್ಲೆಯಲ್ಲಿ ಪ್ರಥಮವಾಗಿ ರಾಜ್ಯೋತ್ಸವ ಆಚರಣೆಯಾಗುತ್ತಿದೆ.

ಕನ್ನಡ ರಾಜ್ಯೋತ್ಸವ ಇತಿಹಾಸ:
ಅಲ್ಲಲ್ಲಿ ಚದುರಿದ್ದ ಕನ್ನಡವನ್ನೆಲ್ಲ ಒಂದು ಗೂಡಿಸಿ ಅದಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ದಿನ. ಇಂದಿನ ಕರ್ನಾಟಕ ಮೊದಲಿಗೆ ಮೈಸೂರು ಹೆಸರಿನಿಂದ ಗುರುತಿಸಿಕೊಂಡಿತ್ತು. ಸ್ವಾತಂತ್ರದ ನಂತರ, ಒಡೆಯರ್ ಮಹಾರಾಜ ಭಾರತದ ಭಾಗವಾಗಲು ಸಮ್ಮತಿಸಿದರು. 1950ರಲ್ಲಿ ಮೈಸೂರು ಭಾರತದ ರಾಜ್ಯವಾಯಿತು ಹಾಗು ಪೂರ್ವ ಮಹಾರಾಜ 1957ರವರಗೆ ರಾಜ್ಯಪಾಲರಾದರು.

ಏಕೀಕರಣ ಚಳುವಳಿ 19ನೆಯ ಶತಮಾನದ ಎರಡನೇ ಭಾಗದಲ್ಲಿ ಪ್ರಾರಂಭವಾಗಿ 1956 ರಾಜ್ಯ ಪುನರ್‌ಸಂಘಟನೆ ಕಾಯಿದೆ ಯೊಂದಿಗೆ ಮುಕ್ತಾಯವಾಯಿತು. ಇದರಿಂದ ಕೂರ್ಗ್, ಮದ್ರಾಸ್, ಹೈದರಾಬಾದ್, ಹಾಗು ಬಾಂಬೆ ರಾಜ್ಯದ ಭಾಗಗಳನ್ನು ಮೈಸೂರು ರಾಜ್ಯಕ್ಕೆ ಸೇರ್ಪಡಿಸಲಾಯಿತು. ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ಪುನರ್ನಾಮಕರಣ ಮಾಡಲಾಯಿತು.

ಕಾರ್ಖಾನೆಯ ಹಿರಿಯ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕೆಲಸಗಾರರು ಈ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಯ ಭಾರತ ಜನನಿಯ ತನುಜಾತೆ ಕನ್ನಡ ಭಾಷೆಗೆ ಉತ್ತೇಜನವನ್ನು ನೀಡಿ ಸಂತಸವನ್ನು ಹಂಚಿಕೂಂಡರು.

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಯು ಕಳೆದ ೨೮ ವರ್ಷಗಳಿಂದ ಈ ಕಾರ್ಯಕ್ರಮವನ್ನು ಆಯೋಜಿಸಿ ನ.1ನೇ ತಾರೀಕು ಧ್ವಜಾರೋಹಣವನ್ನು ಮಾಡುವುದರ ಮೂಲಕ ಕನ್ನಡದ ಹಿರಿಮೆಯನ್ನು ಹೆಚ್ಚಿಸಿಕೊಂಡು ಬಂದಿರುತ್ತದೆ.

ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳಾದ ಎಂ. ಜಿ.ನಾಗರಾಜ್, ಸಿ. ರಮೇಶ್, ಜಿ.ಎಸ್. ಕೃಷ್ಣಮೂರ್ತಿ ಮತ್ತು ಕಿರಣ್ ಶೇಜೆಕರ್, ಕಾರ್ಮಿಕ ಸಂಘದ ಶರಣಪ್ಪ , ಬಸವರಾಜ್ ಕಂಠಿ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

ಕಾರ್ಯಕ್ರಮ ನಿರೂಪಣೆ ಮಾಡಿದ ಸುರಕ್ಷತಾ ವಿಭಾಗದ ಹಿರಿಯ ಅಧಿಕಾರಿ ಎಂ.ಎಂ. ನಾಡಿಗೇರ್ ರವರು ತಮ್ಮ ನಿರೂಪಣೆಯಲ್ಲಿ ಇಂದಿನ ದಿನದಲ್ಲಿ ಸುರಕ್ಷತೆಗೆ ಹೆಚ್ಚಿನ ಗಮನವನ್ನು ನೀಡಿ ಅಪಘಾತ ರಹಿತ ಕೆಲಸಗಳನ್ನು ಮಾಡಲು ಶುಮಿಸಬೇಕು ಮತ್ತು ಸುರಕ್ಷತೆಯನ್ನು ಮೊದಲ ಆದ್ಯತೆ ಮಾಡಿಕೊಂಡು ಉತ್ಪಾದನೆ, ಗುಣಮಟ್ಟಕ್ಕೆ ಹೆಚ್ಚಿನ ಗಮನ ನೀಡಿ ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ನಮ್ಮ ಕಾರ್ಖಾನೆಗಳಲ್ಲಿ ಸುರಕ್ಷತೆ ಹೆಚ್ಚಿಸಲು ಡುಪಾಂಟ್ ಸೇಪ್ಟಿ ಸೇಲೋಷನ್ ಸಂಸ್ಥೆಯ ಜೊತೆ ಒಪ್ಪಂದ ಮಾಡಿಕೊಂಡು ಕಳೆದ ಎರಡು ತಿಂಗಳಿನಿಂದ ಈ ಸಂಸ್ಥೆ ನಮ್ಮ ಮೂರು ಕಡೆ ಇರುವ ಸಂಸ್ಥೆಗಳಾದ ಕೊಪ್ಪಳ, ಸೊಲ್ಲಾಪುರ ಮತ್ತು ಹಿರಿಯೂರು ಪ್ಲಾಂಟ್‌ಗಳಲ್ಲಿ ಕೆಲಸ ನಿರ್ವಹಣೆ ಮಾಡುತ್ತಿದೆ. ಇದು ಯಶಸ್ಸು ಕಾಣಬೇಕಾದರೆ ತಮ್ಮ ಸಹಕಾರ ಬಹಳ ಮುಖ್ಯ. ಇದಕ್ಕೆ ಸಹಕಾರ ನೀಡಿ ಕಿರ್ಲೋಸ್ಕರ್ ಕಾರ್ಖಾನೆ ಅಪಘಾತ ರಹಿತ ಕಾರ್ಖಾನೆಯಾಗಿ ಕಾರ್ಯ ನಿರ್ವಹಿಸಲು ತಾವು ಮುಂದಾಗಬೇಕು ಎಂದು ತಿಳಿಸಿದರು. ಬರುವ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿ ಸಿಹಿಯನ್ನು ಹಂಚಿ ಕಾರ್ಯಕ್ರಮ ಮುಗಿಸಲಾಯಿತು.

ವರದಿ: ಮುರುಳೀಧರ್ ನಾಡಿಗೇರ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada RajyothsavaKannada Websitekirloskar ferrous industries limitedKoppalaLatest News KannadaNews in KannadaNews Kannadaಕನ್ನಡ ರಾಜ್ಯೋತ್ಸವಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ಕೊಪ್ಪಳ
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪುನೀತ್ ಹಣೆಗೆ ಮುತ್ತಿಟ್ಟು ಅಂತಿಮ ವಿದಾಯ ಹೇಳಿದ ಸಿಎಂ ಬೊಮ್ಮಾಯಿ

Next Post

ಬೀದರ್: ಚೌಳಿ, ಚೊಂಡಿ ಗ್ರಾಮಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಭೇಟಿ

kalpa News

kalpa News

Next Post
ಬೀದರ್: ಚೌಳಿ, ಚೊಂಡಿ ಗ್ರಾಮಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಭೇಟಿ

ಬೀದರ್: ಚೌಳಿ, ಚೊಂಡಿ ಗ್ರಾಮಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಭೇಟಿ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL