ಕಲ್ಪ ಮೀಡಿಯಾ ಹೌಸ್ | ಕೊಪ್ಪಳ |
ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಆವರಣದಲ್ಲಿ ನವೆಂಬರ್ ತಿಂಗಳು ಪೂರ್ಣ ಉದ್ಯೋಗಿಗಳಿಗೆ ವಿವಿಧ ಸ್ಪರ್ದೆಗಳನ್ನು ಏರ್ಪಡಿಸಲಾಗಿತ್ತು.
ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ವತಿಯಿಂದ ಕಾರ್ಖಾನೆಯ ಸಭಾಂಗಣದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣೆ ಹಾಗೂ ಸಾಂಸ್ಕೃತಿಕ ಸಮಾರಂಭವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಡಾ. ಎಸ್. ವೈ. ಸೋಮಶೇಖರ್, ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಪ್ರಾಚೀನ ಮತ್ತು ಪುರಾತತ್ವ ಇಲಾಖೆಯ ಪ್ರಾಧ್ಯಾಪಕರು ವಿಶೇಷ ಅತಿಥಿಯಾಗಿ ಆಗಮಿಸಿದ್ದರು. ಗೌರವಾನ್ವಿತ ಕಾರ್ಯನಿರ್ವಾಹಕ ನಿರ್ದೇಶಕ ಆರ್.ಎಸ್. ಶ್ರೀವತ್ಸನ್ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆಯನ್ನು ವಹಿಸಿದ್ದರು. ಕೆಎಫ್ಐಎಲ್ ಲೇಡೀಸ್ ಕ್ಲಬ್ ಅದ್ಯಕ್ಷರಾದ ಕಮಲಾ ಗುಮಾಸ್ತೆ ಮತ್ತು ಕಿರ್ಲೋಸ್ಕರ್ ಫೆರಸ್ ಕಾರ್ಮಿಕ ಸಂಘದ ಪ್ರದಾನ ಕಾರ್ಯದರ್ಶಿ ಶೇಖಪ್ಪ ಚೌಡಕಿಯವರು ಸಹ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಶೇಷ ಆಹ್ವಾನಿತ ಅತಿಥಿಗಳು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಕನ್ನಡ ನಾಡಿಗೆ ಕೊಪ್ಪಳ ಮತ್ತು ವಿಜಯನಗರದ ಕೊಡುಗೆ ಬಗ್ಗೆ ಭಾಷಣ ಮಾಡುತ್ತಾ ಮಾಹಿತಿ ಮತ್ತು ವಿಷಯವನ್ನು ತಿಳಿಸಿಕೊಟ್ಟರು.
ವೇದಿಕೆ ಮೇಲೆ ಆಸಿನರಾಗಿದ್ದ ಶೇಖಪ್ಪ ಮತ್ತು ಕಮಲಾ ಗುಮಾಸ್ತೆಯವರು ಸಹ ಕನ್ನಡ ನಾಡು ನುಡಿ ಬಗ್ಗೆ ಮಾತನಾಡುತ್ತಾ ಕಾರ್ಖಾನೆಯಲ್ಲಿ ಕನ್ನಡದ ಬಳಕೆ ಆಗುತ್ತಿರುವುದರ ಬಗ್ಗೆ ತಿಳಿಸಿದರು.
ಅದ್ಯಕ್ಷ ಸ್ಥಾನ ವಹಿಸಿದ್ದ ಕಾರ್ಯನಿರ್ವಾಹಕ ನಿರ್ದೇಶಕ ಶ್ರೀವತ್ಸನ್ ಅವರು ಕಾರ್ಖಾನೆಯ ಅಭಿವೃದ್ಧಿ ಹಂತಗಳನ್ನು ತಿಳಿಸಿ ಶುಭಾಶಯ ಕೋರಿದರು. ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷರಾದ ಪಿ.ನಾರಾಯಣ ಈ ಸಂಧರ್ಭದಲ್ಲಿ ತಮ್ಮ ಕನ್ನಡದ ಅನುಭವವನ್ನು ಹಂಚಿಕೊಂಡರು.
ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ ಉದ್ಯೋಗಿಗಳಿಗೆ ಬಹುಮಾನ ನೀಡಲಾಯಿತು. ಮತ್ತು ಫೌಂಡ್ರಿ ಮತ್ತು ಪಿಐಪಿ ವಿಭಾಗದ ಕಾರ್ಮಿಕರಿಗೆ ಆದರ್ಶ ಕಾರ್ಮಿಕ ಪ್ರಶಸ್ತಿ ಮತ್ತು ಉತ್ತಮ ಕೆಲಸ ಮಾಡಿದ ಉದ್ಯೋಗಿಗಳಿಗೆ ಪ್ರಶಸ್ತಿ ಮತ್ತು ಬಹುಮಾನಗಳನ್ನು ನೀಡಿ ಗೌರವಿಸಲಾಲಾಯಿತು.
ಈ ಕಾರ್ಯಕ್ರಮದಲ್ಲಿ ಡಾ. ಎಸ್ ವೈ ಸೋಮಶೇಖರ್ ,ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಪ್ರಾಚೀನ ಮತ್ತು ಪುರಾತತ್ವ ಇಲಾಖೆಯ ಪ್ರಾಧ್ಯಾಪಕರು ವಿಶೇಷ ಅತಿಥಿ ಯಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶೋಭೆ ತಂದಿದ್ದನ್ನು ಗೌರವಿಸಿ ಅವರನ್ನು ಸನ್ಮಾನಿಸಲಾಯಿತು.
ಸುರಕ್ಷತಾ ವಿಭಾಗದ ಅಧಿಕಾರಿ ಮುರುಳೀಧರ್ ನಾಡಿಗೇರ್ ಕಾರ್ಯಕ್ರಮ ಪೂರ್ಣ ನಿರೂಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಬೀಡು ಕಬ್ಬಿಣ ವಿಭಾಗದ ಕಾರ್ಯನಿರ್ವಾಹಕ ಉಪಾದ್ಯಕ್ಷ ಎಂ. ಜಿ. ನಾಗರಾಜ್ ಮತ್ತು ವಿವಿದ ವಿಭಾಗದ ಕಾರ್ಮಿಕರು, ಉದ್ಯೋಗಿಗಳು, ಹಿರಿಯ ಅಧಿಕಾರಿಗಳು ಮತ್ತು ಲೇಡೀಸ್ ಕ್ಲಬ್ ಸದಸ್ಯರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೆ ಕಾರಣಕರ್ತರಾದರು.


ವರದಿ: ಮುರುಳೀಧರ್ ನಾಡಿಗೇರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















