ಕಲ್ಪ ಮೀಡಿಯಾ ಹೌಸ್ | ಕೊಪ್ಪಳ |
ಇಂದಿನ ಕರ್ನಾಟಕ ಮೊದಲಿಗೆ ಮೈಸೂರು ಹೆಸರಿನಿಂದ ಗುರುತಿಸಿಕೊಂಡಿತ್ತು. 1950ರಲ್ಲಿ ಮೈಸೂರು ಭಾರತದ ರಾಜ್ಯವಾಯಿತು. ಅಲ್ಲಲ್ಲಿ ಚದುರಿದ್ದ ಕನ್ನಡವನ್ನೆಲ್ಲ ಒಂದು ಗೂಡಿಸಿ ಅದಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ದಿನವನ್ನೇ ಕನ್ನಡ ರಾಜ್ಯೋತ್ಸವವಾಗಿ ಆಚರಿಸಲಾಯಿತು ಎಂದು ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಆರ್. ವಿ. ಗುಮಾಸ್ತೆ ತಿಳಿಸಿದರು.
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ನಲ್ಲಿ ಆಯೋಜಿಸಲಾಗಿದ್ದ 50 ವರ್ಷದ ಕರ್ನಾಟಕದ ಸಂಭ್ರಮ ಮತ್ತು 68ನೇಯ ಕನ್ನಡ ರಾಜ್ಯೋತ್ಸವವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ Kirloskar Ferrus Industries Ltd ಕಾರ್ಖಾನೆಯು ಕಳೆದ 30 ವರ್ಷಗಳಿಂದ ಈ ಕಾರ್ಯಕ್ರಮವನ್ನು ಆಯೋಜಿಸಿ ನವಂಬರ್ 1ನೇ ತಾರೀಕು ಧ್ವಜಾರೋಹಣವನ್ನು ಮಾಡುವುದರ ಮೂಲಕ ಕನ್ನಡದ ಹಿರಿಮೆಯನ್ನು ಹೆಚ್ಚಿಸಿಕೊಂಡು ಬಂದಿದೆ ಎಂದರು.
ವ್ಯವಸ್ಥಾಪಕ ನಿರ್ದೇಶಕ ರವಿಂದ್ರನಾಥ ಗುಮಾಸ್ತೆ ಮಾತನಾಡಿ, ಕರ್ನಾಟಕ ರಾಜ್ಯೋತ್ಸವದ ಮಹತ್ವ ಮತ್ತು ಕಾರ್ಖಾನೆಯ ಅಭಿವೃದ್ಧಿ ಹಾಗೂ ಮುಂದಿನ ದಿನದಲ್ಲಿ ನಾವು ಮಾಡುವ ಅಭಿವೃದ್ಧಿ ಕಾರ್ಯವನ್ನು ಮುಂದಿಟ್ಟುಕೊಂಡು ಮಾತನಾಡಿ ಶ್ರಮಿಕರ ಕಾರ್ಯವನ್ನು ಸ್ಮರಿಸಿದರು.
ಕರ್ನಾಟಕ ರಾಜ್ಯ ರೂಪುಗೊಂಡಾಗ ಒಟ್ಟು 19 ಜಿಲ್ಲೆಗಳನ್ನು ಒಳಗೊಂಡಿತ್ತು ಈಗ ಅದು 31 ಜಿಲ್ಲೆಯಾಗಿ ರೂಪುಗೊಂಡ ಕರ್ನಾಟಕದ ಎಲ್ಲೆಡೆಯೂ ಕನ್ನಡ ರಾಜ್ಯೋತ್ಸವ / ಕರ್ನಾಟಕ ರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ. “ಏಕೀಕರಣ” ಚಳುವಳಿ 19ನೆಯ ಶತಮಾನದ ಎರಡನೇ ಭಾಗದಲ್ಲಿ ಪ್ರಾರಂಭವಾಗಿ 1956 ರಾಜ್ಯ ಪುನರ್ ಸಂಘಟನೆ ಕಾಯಿದೆ ಯೊಂದಿಗೆ ಮುಕ್ತಾಯವಾಯಿತು. ಇದರಿಂದ ಕೂರ್ಗ್, ಮದ್ರಾಸ್, ಹೈದರಾಬಾದ್, ಹಾಗು ಬಾಂಬೆ ರಾಜ್ಯದ ಭಾಗಗಳನ್ನು ಮೈಸೂರು ರಾಜ್ಯಕ್ಕೆ ಸೇರ್ಪಡಿಸಲಾಯಿತು. ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ಪುನರ್ನಾಮಕರಣ ಮಾಡಲಾಯಿತು ಎಂದು ತಿಳಿಸಿದರು.
ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಕಾರ್ಯನಿರ್ವಾಹಕ ಉಪಾದ್ಯಕ್ಷ ಪಿ. ನಾರಾಯಣ ಮಾತನಾಡಿ, ಕನ್ನಡ ಹಿರಿಮೆ ಮತ್ತು ಆಡಳಿತ ವಿಭಾಗದ ಸದುಪಯೋಗಿ ಕಾರ್ಯಕ್ರಮಗಳನ್ನು ತಮ್ಮ ಭಾಷಣದಲ್ಲಿ ತಿಳಿಸಿ, ಕಾರ್ಖಾನೆ ಬೆಳೆದು ಇಂದು 7 ಕಾರ್ಖಾನೆಯ ಒಡೆಯನಾಗಿ ಕೆಲಸ ನಿರ್ವಹಣೆ ಮಾಡುತ್ತಿದೆ ಎಂದು ತಿಳಿಸಿದರು.
ಕಾರ್ಮಿಕ ಸಂಘದ ಮುಖ್ಯಸ್ಥರಾದ ವಿಜಯ ಭಾಸ್ಕರ್ ರೆಡ್ಡಿ ಮಾತನಾಡಿ, ಕನ್ನಡ ಭಾಷೆಯ ಮಹತ್ವದ ಬಗ್ಗೆ ತಿಳಿಸಿ ಆಡಳಿತ ವರ್ಗವು ಈ ಸಾಲಿನ ಭೂನಸ್ ಬಿಡುಗಡೆ ಮಾಡಲು ಒಪ್ಪಿಗೆ ಸೂಚಿಸಿದ ಹಿನ್ನಲೆಯಲ್ಲಿ ಸಂತಸ ವ್ಯಕ್ತಪಡಿಸಿದರು.
ಬೀಡುಕಬ್ಬಿಣ ವಿಭಾಗದ ಕಾರ್ಯ ನಿರ್ವಾಹಕ ಉಪಾಧ್ಯಕ್ಷ ಎಂ.ಜಿ.ನಾಗರಾಜ್ ಮಾತನಾಡಿ, ಕನ್ನಡ ಇತಿಹಾಸ ಪರಂಪರೆ ಬೆಳೆದುಬಂದ ಹಾದಿಯನ್ನು ತಿಳಿಸಿ ಶುಭಾಶಯ ಕೋರಿದರು.
ಕಾರ್ಖಾನೆಯ ಹಿರಿಯ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕೆಲಸಗಾರರು ಈ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಯ ಭಾರತ ಜನನಿಯ ತನುಜಾತೆ ಗಾಯನದ ಮೂಲಕ ಕನ್ನಡ ಭಾಷೆಗೆ ಉತ್ತೇಜನವನ್ನು ನೀಡಿ ಸಂತಸವನ್ನು ಹಂಚಿಕೂಂಡರು.
ಕಾರ್ಯಕ್ರಮದಲ್ಲಿ ಹಣಕಾಸು ವಿಭಾಗದ ಕಾರ್ಯ ನಿರ್ವಾಹಕ ನಿರ್ದೇಶಕ ಆರ್. ಎಸ್. ಶ್ರೀವತ್ಸನ್, ಕಾರ್ಖಾನೆಯ ಅಧ್ಯಕ್ಷ ಸಿ. ರಮೇಶ್, ಕಾರ್ಮಿಕರು, ಹಿರಿಯ ಅಧಿಕಾರಿಗಳು, ಹೆಚ್ ಆರ್ ಎಂ ವಿಭಾಗದ ಅಧಿಕಾರಿಗಳು, ಕಾರ್ಮಿಕ ಸಂಘದ ಪದಾಧಿಕಾರಿಗಳು, ಗುತ್ತಿಗೆ ಕಾರ್ಮಿಕರು ಹಾಜರಿದ್ದರು.
ಕಾರ್ಯಕ್ರಮ ಪ್ರಾರಂಭದಲ್ಲಿ ಮುರುಳಿಧರ್ ನಾಡಿಗೇರ್ ರವರು ಕರ್ನಾಟಕ ಸರ್ಕಾರದ ಇಂದಿನ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು ಮಹತ್ವದ ಬಗ್ಗೆ ಮಾಹಿತಿ ನೀಡುವುದರ ಮೂಲಕ ಕಾರ್ಯಕ್ರಮ ನಿರೂಪಣೆಯನ್ನು ಮಾಡಿದರು.
ವಿಶೇಷತೆಯೆಂದರೆ ಕಿರ್ಲೋಸ್ಕರ್ ಆಫೀಸರ್ ಲೇಡೀಸ್ ಕ್ಲಬ್ ನ ಅಧ್ಯಕ್ಷ ಕಮಲಾ ಗುಮಾಸ್ತೆ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರಾದ ಶಿಲ್ಪ ಶ್ರೀತ್ಸನ್ ಇವರು ಸಹ ಇಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕೊನೆಯಲ್ಲಿ ಶುಭಾಶಯಗಳನ್ನು ತಿಳಿಸುವುದರ ಮೂಲಕ ಸಿಹಿಯನ್ನು ಹಂಚಿ ಕಾರ್ಯಕ್ರಮ ಮುಗಿಸಲಾಯಿತು. ಭದ್ರತಾ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮತ್ತು ಆಡಳಿತ ವಿಭಾಗದ ಅಧಿಕಾರಿಗಳು ಕರ್ನಾಟಕ ರಾಜೋತ್ಸವದ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದರು.
(ವರದಿ: ಮುರುಳೀಧರ್ ನಾಡಿಗೇರ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post