ಕಲ್ಪ ಮೀಡಿಯಾ ಹೌಸ್
ಕೊಪ್ಪಳ: ಕಿರ್ಲೋಸ್ಕರ್ ಸಂಸ್ಥೆ ವತಿಯಿಂದ ರೆಡ್ ಕ್ರಾಸ್ ಸೊಸೈಟಿ ಮತ್ತು ಹೊಸಪೇಟೆಯ ಬಲ್ಡೋಟ ಬ್ಲಡ್ ಬ್ಯಾಂಕ್ ಸಂಸ್ಥೆ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಲಾಗಿದ್ದ ಈ ಕಾರ್ಯಕ್ರಮವನ್ನು ಸಂಸ್ಥೆಯ ಪ್ರೆಸಿಡೆಂಟ್ ಎನ್. ಬಿ. ಏಕತಾರೆ ಉದ್ಘಾಟಿಸಿದರು.
ಕಂಪನಿಯ ಉದ್ಯೋಗಿಗಳು, ತರಬೇತಿದಾರರು, ಕಾರ್ಮಿಕರು, ಗುತ್ತಿಗೆದಾರರು, ಗುತ್ತಿಗೆ ಕಾರ್ಮಿಕರು ಮತ್ತು ಅಕ್ಕಪಕ್ಕದ ಗ್ರಾಮದ ಯುವಕರು ಸ್ವಯಂ ಪ್ರೇರಿತವಾಗಿ ಬಂದು ರಕ್ತದಾನವನ್ನು ಮಾಡಿದರು. ಈ ಸಂದರ್ಭದಲ್ಲಿ ೨೨೮ ಬ್ಲಡ್ ಯುನಿಟ್ ಸಂಗ್ರಹಿಸಲಾಯಿತು.
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆಯ ಮಾನವ ಸಂಪನ್ಮೂಲ ಮತ್ತು ಸಾಮಾನ್ಯ ಆಡಳಿತ ವಿಭಾಗದ ಹಿರಿಯ ಉಪಾಧ್ಯಕ್ಷ ಪಿ. ನಾರಾಯಣ, ಹಣಕಾಸು ವಿಭಾಗದ ಮುಖ್ಯಸ್ಥರಾದ ಆರ್.ಎಸ್. ಶ್ರೀವತ್ಸನ್ ಹಾಗೂ ಕಿರ್ಲೋಸ್ಕರ್ ಕಾರ್ಪೊರೇಟ್ ಕಂಪನಿಯ ಉಪಾಧ್ಯಕ್ಷ ಜಾರ್ಜ್ ವರ್ಗಿಸ್ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post