ಕಲ್ಪ ಮೀಡಿಯಾ ಹೌಸ್ | ಕೊಪ್ಪಳ |
ಬೆಂಗಳೂರಿನ ಕರಂ ಸೇಫ್ಟಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆ, ಕಾರ್ಖಾನೆಗಳು ಮತ್ತು ಬಾಯ್ಲರ್‌ಗಳ ಇಲಾಖೆಯ ಸಹಕಾರದೊಂದಿಗೆ ವರ್ಕಿಂಗ್ ಅಟ್ ಹೈಟ್ ಮತ್ತು ಕಂಪೈನ್ಡ್ ಸ್ಪೇಸ್ ಎಂಟ್ರಿ ವಿಷಯದ ಮೇಲೆ ವಿಚಾರ ಸಂಕಿರಣ ನಡೆಯಿತು.
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ #Kirloskar Ferrous Industry ವ್ಯವಸ್ಥಾಪಕ ನಿರ್ದೇಶಕ ಆರ್ ವಿ ಗುಮಾಸ್ತೆ, ಹುಬ್ಬಳ್ಳಿ ವಿಭಾಗದ ಕಾರ್ಖಾನೆಗಳ ಜಂಟಿ ನಿರ್ದೇಶಕ ರವೀಂದ್ರನಾಥ್ ರಾಥೋಡ್, ನ್ಯಾಷನಲ್ ಸೇಫ್ಟಿ ಕೌನ್ಸಿಲ್ ಸೆಕ್ರೆಟರಿ ಪಿ ವೆಂಕಟೇಶ್ವರಲು, ಬಳ್ಳಾರಿ ವಿಭಾಗದ ಕಾರ್ಖಾನೆಗಳ ಹಿರಿಯ ಸಹಾಯಕ ನಿರ್ದೇಶಕ ವರುಣ್, ಕೊಪ್ಪಳ ವಿಭಾಗದ ಕಾರ್ಖಾನೆಗಳ ಸಹಾಯಕ ನಿರ್ದೇಶಕ ವಿಜಯಕುಮಾರ್, ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಪಿ. ನಾರಾಯಣ್ ಹಾಗೂ ಬೀಡು ಕಬ್ಬಿಣ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಎಂ.ಜಿ. ನಾಗರಾಜ್ ಇವರಿಂದ ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮವು ಉದ್ಘಾಟಿಸಲಾಯಿತು.

Also read: ಉತ್ತಮ ಜೀವನಕ್ಕಾಗಿ ಜ್ಯೋತಿಷ್ಯದ ಮೂಲತತ್ವದ ಅರಿವು ಅಗತ್ಯ: ರಾಘವೇಶ್ವರ ಶ್ರೀ
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಾ ಸುತ್ತಮುತ್ತಲು ಇರುವ ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ 30 ಕಾರ್ಖಾನೆಗಳ ಮೈಂಟೇನೆನ್ಸ್ ಮತ್ತು ಸುರಕ್ಷತಾ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನವನ್ನು ಪಡೆದರು.
ಇದೇ ಸಂದರ್ಭದಲ್ಲಿ ಅಪಘಾತ ನಿರ್ವಹಣೆಯ ಬಗ್ಗೆ 120 ಉದ್ಯೋಗಿಗಳಿಗೆ ತರಬೇತಿ ನೀಡಲಾಯಿತು.

ವರದಿ: ಮರುಳೀಧರ ನಾಡಿಗೇರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post