ಕಲ್ಪ ಮೀಡಿಯಾ ಹೌಸ್ | ಕೊಪ್ಪಳ |
ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಗ್ರಾಮದ ತುಂಗಭದ್ರಾ ನದಿಯ ಮಧ್ಯದಲ್ಲಿರುವ ನವವೃಂದಾವನ ಗಡ್ಡೆಯಲ್ಲಿ ಮೂರು ದಿನಗಳ ಶ್ರೀ ರಘುವರ್ಯತೀರ್ಥರ ಆರಾಧನಾ ಮಹೋತ್ಸವಕ್ಕೆ ಶುಕ್ರವಾರ ಅದ್ದೂರಿ ಚಾಲನೆ ನೀಡಲಾಯಿತು.
ಶ್ರೀಮನ್ ಮಧ್ವಾಚಾರ್ಯ ಮೂಲ ಸಂಸ್ಥಾನದ ಶ್ರೀರಘುವರ್ಯತೀರ್ಥರ ಪೂರ್ವಾರಾಧನೆ ಆರಂಭಗೊಂಡಿದ್ದು, ಶ್ರೀ ಉತ್ತರಾದಿ ಮಠದ ಪೀಠಾಧಿಪತಿಗಳಾದ ಶ್ರೀಸತ್ಯಾತ್ಮತೀರ್ಥ ಶ್ರೀಪಾದಂಗಳವರು ಹಾಗೂ ಕೂಡ್ಲಿ ಆರ್ಯ ಶ್ರೀಅಕ್ಷೋಭ್ಯತೀರ್ಥ ಮಠದ ಶ್ರೀರಘುವಿಜಯ ತೀರ್ಥ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಮೂರು ದಿನಗಳ ನವೃಂದಾವನದಲ್ಲಿ ಒಂದಾದ ಶ್ರೀರಘುವರ್ಯತೀರ್ಥರ ಆರಾಧನಾ ಮಹೋತ್ಸವ ನಡೆಯಲಿದೆ.

ಮೂರು ದಿನಗಳ ಕಾಲ ವಿದ್ವಾಂಸರ ಪ್ರವಚನ ಸೇರಿದಂತೆ ಅನೇಕ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಉಭಯ ಶ್ರೀಗಳ ಅನುಗ್ರಹ ಸಂದೇಶ, ಅಷ್ಟಾವಧಾನ ಕಾರ್ಯಕ್ರಮ, ಮಹಾಮಂಗಳಾರತಿ ಸೇರಿದಂತೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಮೂರು ದಿನಗಳ ಕಾಲ ನಡೆಯಲಿವೆ.

ಮಠದ ದಿವಾನರಾದ ಪಂಡಿತ ಶಶಿಧರಚಾರ್ಯರು, ಉಮರ್ಜಿ ಶ್ರೀಕರಾಚಾರ್ಯಾ, ಮಹಿಷಿ ಆನಂದ ಆಚಾರ್ಯರು, ನರಸಿಂಹ ಆಚಾರ್ಯ ಯಲಬುರ್ಗಾ, ಉಮರ್ಜಿ ರಾಮಾಚಾರ್ಯರು, ಬಳ್ಳಾರಿ ರಾಘವೇಂದ್ರ ಆಚಾರ್ಯರು, ವ್ಯವಸ್ಥಾಪಕರಾದ ಅಕ್ಕಲಕೋಟ ಆನಂದಆಚಾರ್ಯರು, ಮುರಗೋಡು ವಿಜಯ ವಿಠಲ ಆಚಾರ್ಯರು, ಮಠದ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀಪ್ರಸನ್ನಾಚಾರ್ಯ ಕಟ್ಟಿ, ವಿಷ್ಣು ತೀರ್ಥ ಆಚಾರ್ಯ ಜೋಶಿ, ಅಖಿಲ ಆಚಾರ್ಯ ಅತ್ರೆ, ವೆಂಕಟಗಿರಿ ಆಚಾರ್ಯ ಅನ್ವೇರಿ ಅವರನ್ನು ಒಳಗೊಂಡಂತೆ ಅನೇಕ ಮಠದ ಪಂಡಿತ ಗಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post