ಕಲ್ಪ ಮೀಡಿಯಾ ಹೌಸ್ | ಕೊಪ್ಪಳ |
ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ಮಾಡುತ್ತಿದ್ದ ಮೂವರ ಮೇಲೆ ಬಸ್ ಹರಿದು ದುರ್ಮರಣ ಹೊಂದಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನಪಲ್ಲಿ ಗ್ರಾಮದ ಬಳಿ ನಡೆದಿದೆ.
ಅನ್ನಪೂರ್ಣ, ಪ್ರಕಾಶ್ ಮತ್ತು ಶರಣಪ್ಪ ಎಂಬುವರು ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.
ಇನ್ನು ನಾಲ್ಕು ಜನರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ರವಾನಿಸಲಾಗಿದೆ.
ಸಿಂದಗಿಯಿಂದ ಬೆಂಗಳೂರಿಗೆ ಹೊರಟಿದ್ದ ಸ್ಲೀಪರ್ ಬಸ್ ಪಾದಯಾತ್ರಿಗಳ ಮೇಲೆ ಹರಿದು ಈ ಘಟನೆ ಸಂಭವಿಸಿದೆ.
ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಕೊಪ್ಪಳ ಎಸ್ಪಿ ರಾಮ್ ಎಲ್ ಅರಸಿದ್ದಿ ಭೇಟಿ ನೀಡಿದ್ದು, ಪೋಲಿಸರಿಂದ ತನಿಖೆ ನಡೆಯುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post