ಕಲ್ಪ ಮೀಡಿಯಾ ಹೌಸ್ | ಕೊಪ್ಪಳ |
2014ರ ಆಗಸ್ಟ್ 28ರಂದು ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಜಾತಿಯ ಕಾರಣಕ್ಕಾಗಿ ದಲಿತರ ಮೇಲೆ ಹಲ್ಲೆ ನಡೆಸಿ, ಮನೆಗಳನ್ನ ಧ್ವಂಸಗೊಳಿಸಿದ್ದ ಆರೋಪಿಗಳಿಗೆ ಇಡೀ ದೇಶದಲ್ಲೇ ಮೊದಲು ಎನ್ನುವಂತಹ ಶಿಕ್ಷೆಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೀಡಿದೆ.
ಈ ಕುರಿತಂತೆ ಶಿಕ್ಷೆ ಪ್ರಮಾಣ ಪ್ರಕಟಿಸಿರುವ ನ್ಯಾಯಾಧೀಶರಾದ ಚಂದ್ರಶೇಖರ್ ಅವರು,, ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿಯ 101 ಅಪರಾಧಿಗಳ ಪೈಕಿ 98 ಮಂದಿಗೆ 9 ವರ್ಷಗಳ ಬಳಿಕ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.
ಉಳಿದ ಮೂವರಿಗೆ ಕಠಿಣ ಶಿಕ್ಷೆ, ತಲಾ 2 ಸಾವಿರ ದಂಡ ವಿಧಿಸಿದೆ. 117 ಮಂದಿಯ ಪೈಕಿ 16 ಆರೋಪಿಗಳು ಮೃತಪಟ್ಟಿದ್ದಾರೆ. 101 ಆರೋಪಿಗಳ ವಿರುದ್ಧ ಇರುವ ದಾಖಲೆ ಪರಿಶೀಲನೆ ಮಾಡಲಾಗಿದ್ದು, ಅಕ್ಟೋಬರ್ 21ರಂದು ಆರೋಪಿಗಳ ವಿರುದ್ಧದ ಆರೋಪ ಸಾಬೀತಾಗಿದೆ.
Also read: ಭದ್ರಾವತಿ | ಐತಿಹಾಸಿಕ ಪ್ರಸಿದ್ಧ ಲಕ್ಷ್ಮಿನರಸಿಂಹ ದೇಗುಲ ದುರಸ್ಥಿಗೆ ಒತ್ತಾಯ
ತೀರ್ಪಿನ ಹಿನ್ನೆಲೆಯಲ್ಲಿ ತಡರಾತ್ರಿ ಬಿಗಿ ಬಂದೋಬಸ್ತ್’ನಲ್ಲಿ ಎಲ್ಲಾ ಅಪರಾಧಿಗಳನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.
ವಿಷಯ ತಿಳಿದು ಓರ್ವ ಅಪರಾಧಿ ನಿಧನ
ಇನ್ನು, ಜೀವಾವಧಿ ಶಿಕ್ಷೆ ಪ್ರಕಟವಾಗಿರುವ ಸುದ್ದಿ ತಿಳಿದು ಆಘಾತಕ್ಕೆ ಒಳಗಾದ ಆರೋಪಿ ರಾಮಪ್ಪ ಭೋವಿ(44) ಎಂಬಾತ ಮೃತಪಟ್ಟಿದ್ದಾನೆ.
ರಾಮಪ್ಪನನ್ನೂ ಸಹ ಕೊಪ್ಪಳ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿತ್ತು. ಜೀವಾವಧಿ ಶಿಕ್ಷೆ ಪ್ರಕಟವಾದ ವಿಚಾರ ತಿಳಿದ ನಂತರ ಆತ ಆಘಾತಕ್ಕೀಡಾಗಿ, ಆತನ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಯಿತಾದರೂ, ಆತ ಕೊನೆಯುಸಿರೆಳೆದಿದ್ದಾನೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post