ಕಲ್ಪ ಮೀಡಿಯಾ ಹೌಸ್ | ಕೊಟ್ಟಿಗೆಹಾರ |
ಮೂಡಿಗೆರೆ ತಾಲೂಕಿನ ಅಬ್ರುಕೊಡುಗೆ ಬಳಿ ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಪ್ರಪಾತಕ್ಕೆ ಕಾರೊಂದು ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಳೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜನ್ನಪುರದಲ್ಲಿ ಹೋಟೆಲ್ ನಡೆಸುತ್ತಿದ್ದ ಅಣಜೂರು ಜಯಮ್ಮನಾಗೇಶ ಅವರ ಪುತ್ರ ರಂಜನ್(38) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ರಂಜನ್ ಅವರು ಜನ್ನಾಪುರದಿಂದ ಕಳಸ ಕಡೆಗೆ ಹೋಗುವಾಗ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಎನ್ನಲಾಗಿದೆ.
Also read: ಪ್ರತ್ಯೇಕ ಪ್ರಕರಣಗಳಲ್ಲಿ ರೈಲಿಗೆ ಸಿಲುಕಿ ಇಬ್ಬರು ಸಾವು











Discussion about this post