ಕಲ್ಪ ಮೀಡಿಯಾ ಹೌಸ್ | ಕೋಝಿಕ್ಕೋಡ್ |
ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳೆಯೊಬ್ಬರು ಆರೋಪಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ #Sexual harassment video viral in Social network ಆಗುತ್ತಿದ್ದಂತೆ ವ್ಯಕ್ತಿ ಆತ್ಮಹತ್ಯೆ #A person commits suicide ಮಾಡಿಕೊಂಡಿರುವ ಆಘಾತಕಾರಿ ಘಟನೆ ಕೇರಳದ ಕೋಝಿಕ್ಕೋಡ್‌ನಲ್ಲಿ ನಡೆದಿದೆ.
ಕೋಝಿಕ್ಕೋಡ್‌ನ ಗೋವಿಂದಪುರಂ ನಿವಾಸಿ ದೀಪಕ್ (42) ಆತ್ಮಹತ್ಯೆಗೆ ಶರಣಾಗಿದ್ದು, ಬೆಳಗ್ಗೆ 7 ಗಂಟೆ ಸುಮಾರಿಗೆ ಪೋಷಕರು ಆತನನ್ನು ಎಬ್ಬಿಸಲು ಪ್ರಯತ್ನಿಸಿದಾಗ ಆತ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಲೈಂಗಿಕ ಕಿರುಕುಳ ಆರೋಪದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ದೀಪಕ್ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ವರದಿಯಾಗಿದೆ.
ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ ಪಡೆಯುವುದಕ್ಕಾಗಿ ಮಹಿಳೆಯು ದೀಪಕ್‌ನ ಸಾವಿಗೆ ಕಾರಣವಾಗಿದ್ದಾಳೆ. ಈ ವಿಡಿಯೋ 20 ಲಕ್ಷಕ್ಕೂ ಹೆಚ್ಚು ಜನರು ಇದನ್ನು ವೀಕ್ಷಿಸಿದ್ದಾರೆ ಎಂದು ಆತನ ಪೋಷಕರು ಆರೋಪಿಸಿದ್ದಾರೆ.
ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















