No Result
View All Result
Bharatanatyam Of Sukti Performance Sampattu Grace Rhythm copy
English Articles

Grace and Rhythm Mark Sukthi’s Bharatanatyam Performance at Sampattu

by kalpa News
October 19, 2026
0

Kalpa Media House  |  Special Article By Rasikapriya  | Sukthi T.R., a promising young Bharatanatyam dancer, captivated the audience with...

Read moreDetails
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
  • Advertise With Us
  • Grievances
  • About Us
  • Contact Us
Saturday, October 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

KSOU ಪರೀಕ್ಷಾ ಅಕ್ರಮ ಆರೋಪ: ಹಣ ಪಡೆದು ನಕಲಿಗೆ ಅವಕಾಶ? ತನಿಖೆಗೆ ಎಬಿವಿಪಿ ಒತ್ತಾಯ

kalpa News by kalpa News
October 24, 2026
in News, ಶಿವಮೊಗ್ಗ
0
ksou exam malpractice allegation abvp demands investigation
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | 

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ (Exam) ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಹಾಗೂ ಪ್ರಾದೇಶಿಕ ನಿರ್ದೇಶಕರನ್ನು ತಕ್ಷಣ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಕಾರ್ಯಕರ್ತರು ಪ್ರಾದೇಶಿಕ ಪರೀಕ್ಷಾ ಕೇಂದ್ರದ ಮುಂಭಾಗ ಪ್ರತಿಭಟನೆ ನಡೆಸಿದರು.

ಪರೀಕ್ಷಾ ಕೇಂದ್ರದಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸುವುದರ ಜೊತೆಗೆ, ಅಕ್ರಮಕ್ಕೆ ಸಂಬಂಧಿಸಿದೆ ಎನ್ನಲಾದ ಪರೀಕ್ಷೆಗಳನ್ನು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಮರು ನಡೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

KSOU:ಹಣ ಪಡೆದು ನಕಲಿಗೆ ಅವಕಾಶ ನೀಡಿದ ಆರೋಪ

ಕೆಎಸ್‌ಓಯು ಪ್ರಾದೇಶಿಕ ಪರೀಕ್ಷಾ ಕೇಂದ್ರದಲ್ಲಿ ಕೆಲವು ವಿದ್ಯಾರ್ಥಿಗಳಿಂದ ಪ್ರತಿ ವಿಷಯಕ್ಕೆ ಸುಮಾರು ₹21 ಸಾವಿರ ಹಣ ಪಡೆದು, ಮೊಬೈಲ್ ಫೋನ್ ಹಾಗೂ ಪುಸ್ತಕಗಳನ್ನು ಬಳಸಿಕೊಂಡು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ ಎಂದು ಎಬಿವಿಪಿ ಕಾರ್ಯಕರ್ತರು ದೂರಿದರು.

ವಿದ್ಯಾರ್ಥಿಗಳಿಂದ ಹಣವನ್ನು ಫೋನ್‌ಪೇ ಮತ್ತು ಗೂಗಲ್ ಪೇ ಮೂಲಕ ಸಂಗ್ರಹಿಸಲಾಗಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ಆರೋಪಗಳ ಸತ್ಯಾಸತ್ಯತೆಯನ್ನು ಪತ್ತೆಹಚ್ಚಲು ಡಿಜಿಟಲ್ ಪಾವತಿ ದಾಖಲೆಗಳನ್ನೂ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

Kalahamsa Infotech private limitedಪ್ರತ್ಯೇಕ ಮಹಡಿಯಲ್ಲಿ ನಕಲು ವ್ಯವಸ್ಥೆ?

ಹಣ ಪಾವತಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ಒಂದು ಮಹಡಿಯಲ್ಲಿ ನಕಲು ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಇತರ ವಿದ್ಯಾರ್ಥಿಗಳನ್ನು ಮಾತ್ರ ಕಟ್ಟುನಿಟ್ಟಿನ ಮೇಲ್ವಿಚಾರಣೆಯಲ್ಲಿ ಪರೀಕ್ಷೆ ಬರೆಯುವಂತೆ ಮಾಡಲಾಗಿದೆ ಎಂಬ ಆರೋಪವನ್ನೂ ಎಬಿವಿಪಿ ಮಾಡಿದೆ.

ನಕಲು ಮಾಡಲು ಅವಕಾಶ ನೀಡಲಾಗಿದೆ ಎನ್ನಲಾದ ಮಹಡಿಯಲ್ಲಿ ಪ್ರತಿದಿನ ಸುಮಾರು 70ರಿಂದ 100 ವಿದ್ಯಾರ್ಥಿಗಳಿಗೆ ಈ ರೀತಿಯ ವ್ಯವಸ್ಥೆ ಮಾಡಲಾಗುತ್ತಿತ್ತು ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಇಂತಹ ಅಕ್ರಮಗಳು ನಡೆದಿರುವುದು ಸಾಬೀತಾದರೆ, ಅದು ಪ್ರಾಮಾಣಿಕವಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುವುದಲ್ಲದೆ, ವಿಶ್ವವಿದ್ಯಾಲಯದ ಪರೀಕ್ಷಾ ವ್ಯವಸ್ಥೆ ಹಾಗೂ ನೀಡಲಾಗುವ ಪದವಿಗಳ ವಿಶ್ವಾಸಾರ್ಹತೆಗೂ ಧಕ್ಕೆ ತರುತ್ತದೆ ಎಂದು ಎಬಿವಿಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಪ್ರಾದೇಶಿಕ ನಿರ್ದೇಶಕರ ಅಮಾನತಿಗೆ ಆಗ್ರಹ

ಪ್ರಕರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ಪ್ರಾದೇಶಿಕ ನಿರ್ದೇಶಕರನ್ನು ತಕ್ಷಣ ಅಮಾನತುಗೊಳಿಸಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಅವರು ಯಾವುದೇ ರೀತಿಯಲ್ಲಿ ತನಿಖೆಯ ಮೇಲೆ ಪ್ರಭಾವ ಬೀರದಂತೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಅಲ್ಲದೆ, ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸ್ವತಂತ್ರ ತನಿಖಾ ಸಮಿತಿ ರಚಿಸಿ, ಹಣ ಸಂಗ್ರಹಣೆ, ನಕಲು ಮಾಡಲು ಅವಕಾಶ ನೀಡಿರುವ ಆರೋಪ ಹಾಗೂ ಪರೀಕ್ಷಾ ಮೇಲ್ವಿಚಾರಣೆಯಲ್ಲಿನ ಲೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.PES Shivamogga

ಸಿಸಿಟಿವಿ, ಡಿಜಿಟಲ್ ಪಾವತಿ ದಾಖಲೆ ಪರಿಶೀಲಿಸಿ

ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಸಾಕ್ಷ್ಯಗಳನ್ನು ಸುರಕ್ಷಿತವಾಗಿ ಸಂರಕ್ಷಿಸಿ ತನಿಖೆಗೆ ಒಳಪಡಿಸಬೇಕು. ಪರೀಕ್ಷಾ ಕೇಂದ್ರದ ಸಿಸಿಟಿವಿ ದೃಶ್ಯಾವಳಿ, ಪರೀಕ್ಷಾ ಕೊಠಡಿಗಳ ಹಂಚಿಕೆ ವಿವರ, ವಿದ್ಯಾರ್ಥಿಗಳ ಹಾಜರಾತಿ ದಾಖಲೆ, ಸಿಬ್ಬಂದಿಯ ಕರ್ತವ್ಯ ವಿವರ ಹಾಗೂ ಡಿಜಿಟಲ್ ಪಾವತಿ ದಾಖಲೆಗಳನ್ನು ಪರಿಶೀಲಿಸಬೇಕು ಎಂದು ಎಬಿವಿಪಿ ಒತ್ತಾಯಿಸಿದೆ.

ತನಿಖೆಯಲ್ಲಿ ಪರೀಕ್ಷಾ ಅಕ್ರಮಗಳು ದೃಢಪಟ್ಟಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ವಿಶ್ವವಿದ್ಯಾಲಯದ ನಿಯಮಗಳು ಮತ್ತು ಅನ್ವಯಿಸುವ ಕಾನೂನುಗಳ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Also Read>> ನೈಋತ್ಯ ರೈಲ್ವೆ ಸ್ವಚ್ಛತಾ ಪಖ್ವಾಡಾ ಅಭಿಯಾನ: ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ ಮತ್ತು ಜನಜಾಗೃತಿಗೆ ಒತ್ತು!

ಪರೀಕ್ಷೆ ಮರು ನಡೆಸಲು ಒತ್ತಾಯ

ಅಕ್ರಮದ ಆರೋಪಕ್ಕೆ ಸಂಬಂಧಿಸಿದ ಪರೀಕ್ಷೆಗಳನ್ನು ವಿದ್ಯಾರ್ಥಿಗಳಿಂದ ಯಾವುದೇ ಹೆಚ್ಚುವರಿ ಶುಲ್ಕ ಪಡೆಯದೆ ಮರು ನಡೆಸಬೇಕು. ಇದರಿಂದ ಪ್ರಾಮಾಣಿಕ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ತನಿಖೆಯ ಪ್ರಗತಿ, ಅಂತಿಮ ವರದಿ ಹಾಗೂ ಕೈಗೊಂಡ ಕ್ರಮಗಳ ಕುರಿತು ವಿಶ್ವವಿದ್ಯಾಲಯ ಅಧಿಕೃತವಾಗಿ ಮಾಹಿತಿ ಪ್ರಕಟಿಸಬೇಕು. ತನಿಖೆಯ ಫಲಿತಾಂಶವನ್ನು ಸಾರ್ವಜನಿಕಗೊಳಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ವ್ಯವಸ್ಥೆಯ ಬಗ್ಗೆ ವಿಶ್ವಾಸ ಮೂಡಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧಿಕಾರಿ ಬರುವವರೆಗೆ ಕದಲುವುದಿಲ್ಲ ಎಂದ ಕಾರ್ಯಕರ್ತರು

ಪ್ರತಿಭಟನೆ ವೇಳೆ ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸುವವರೆಗೆ ಪ್ರತಿಭಟನಾ ಸ್ಥಳದಿಂದ ಕದಲುವುದಿಲ್ಲ ಎಂದು ಎಬಿವಿಪಿ ಕಾರ್ಯಕರ್ತರು ಪಟ್ಟು ಹಿಡಿದರು. ಈ ವೇಳೆ ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಪ್ರಕರಣದ ಕುರಿತು ತಕ್ಷಣ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ಶೈಕ್ಷಣಿಕ ನ್ಯಾಯಕ್ಕಾಗಿ ಪ್ರಜಾಸತ್ತಾತ್ಮಕ ರೀತಿಯಲ್ಲಿ ಹೋರಾಟವನ್ನು ಮುಂದುವರಿಸಲಾಗುವುದು ಎಂದು ಎಬಿವಿಪಿ ಕಾರ್ಯಕರ್ತರು ಎಚ್ಚರಿಕೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Christ King

Kalpa News Advertising Disclaimer

Tags: ABVP ShivamoggaallegationKSOU examಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ಪರೀಕ್ಷಾ ಅಕ್ರಮ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೈಋತ್ಯ ರೈಲ್ವೆ ಸ್ವಚ್ಛತಾ ಪಖ್ವಾಡಾ ಅಭಿಯಾನ: ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ ಮತ್ತು ಜನಜಾಗೃತಿಗೆ ಒತ್ತು!

Next Post

ಐಶಾರಾಮಿ ಜೀವನವೇ ರೋಗಗಳಿಗೆ ಕಾರಣವೇ? ಆರೋಗ್ಯದ ಗುಟ್ಟು ಬಿಚ್ಚಿಟ್ಟ ಮಿಮಿಕ್ರಿ ಗೋಪಿ

kalpa News

kalpa News

Next Post
shivamogga jci india zone 24 ashwamedha zone con 2026

ಐಶಾರಾಮಿ ಜೀವನವೇ ರೋಗಗಳಿಗೆ ಕಾರಣವೇ? ಆರೋಗ್ಯದ ಗುಟ್ಟು ಬಿಚ್ಚಿಟ್ಟ ಮಿಮಿಕ್ರಿ ಗೋಪಿ

No Result
View All Result
Bharatanatyam Of Sukti Performance Sampattu Grace Rhythm copy
English Articles

Grace and Rhythm Mark Sukthi’s Bharatanatyam Performance at Sampattu

by kalpa News
October 19, 2026
0

Kalpa Media House  |  Special Article By Rasikapriya  | Sukthi T.R., a promising young Bharatanatyam dancer, captivated the audience with...

Read moreDetails
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL