ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಾರ್ಚ್ 31ರಿಂದ ಆರಂಭವಾಗಲಿರುವ ಎಸ್’ಎಸ್’ಎಲ್’ಸಿ #SSLC ಪರೀಕ್ಷಾ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಉಡುಗೊರೆಯನ್ನು ಕೆಎಸ್’ಆರ್’ಟಿಸಿ #KSRTC ನೀಡಿದೆ.
ಈ ಕುರಿತಂತೆ ನಿಗಮದ ನಿರ್ದೇಶಕರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಮಾರ್ಚ್ 31ರಿಂದ ಏ.15ರವರೆಗೂ ನಡೆಯಲಿರುವ ಎಸ್’ಎಸ್’ಎಲ್’ಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ಕೆಎಸ್’ಆರ್’ಟಿಸಿ ಬಸ್’ನಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ #Travel ಎಂದಿದ್ದಾರೆ.
ವಿದ್ಯಾರ್ಥಿಗಳು ಪರೀಕ್ಷಾ ದಿನಗಳಂದು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್’ಗಳ ಪ್ರಯಾಣಿಸಬಹುದು ಎಂದಿದ್ದಾರೆ.
ಚಾಲಕ ಹಾಗೂ ನಿರ್ವಾಹಕರಿಗೆ ಸಿಬ್ಬಂದಿಗೆ ವಿದ್ಯಾರ್ಥಿಗಳನ್ನು ಕರೆದೊಯ್ಯಲು ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಕೋರಿದ್ದನ್ನು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post