ಕಲ್ಪ ಮೀಡಿಯಾ ಹೌಸ್ | ಕೂಡಲಸಂಗಮ |
ರಾಜಕೀಯ ಉದ್ದೇಶದಿಂದ ಕಾರವಾರ ಸಂಸದ ಅನಂತಕುಮಾರ ಹೆಗ್ಡೆಯವರು ರಾಜ್ಯದ ಮುಖ್ಯಮಂತ್ರಿಗಳಿಗೆ ಅಶ್ಲೀಲ ಪದಗಳನ್ನು ಬಳಸಿದ್ದರೆ, ಆ ಭಾಷೆ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದರು.
ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಕಾರವಾರ ಸಂಸದ ಅನಂತಕುಮಾರ ಹೆಗ್ಡೆಯವರು MP Ananthakumara Hegde ಅಯೋಧ್ಯೆ ಕಾರ್ಯಕ್ರಮಕ್ಕೆ ಆಹ್ವಾನವಿದ್ದರೂ ಮುಖ್ಯಮಂತ್ರಿಗಳು ತೆರಳುತ್ತಿಲ್ಲವೆಂದು ಏಕವಚನದಲ್ಲಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಇಂತಹ ಹೇಳಿಕೆಗಳು ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಕೇಂದ್ರದ ಮಂತ್ರಿಯಾಗಿದ್ದಾಗ, ಸಂವಿಧಾನವನ್ನೇ ಬದಲಾಯಿಸುತ್ತೇನೆ ಎಂದು ಹೇಳಿದ್ದ ಅನಂತ ಕುಮಾರ್ ಹೆಗ್ಡೆಯವರಿಂದ ಉತ್ತಮ ಸಂಸ್ಕೃತಿಯನ್ನು ಅಪೇಕ್ಷಿಸಲು ಸಾಧ್ಯವಿಲ್ಲ. ಅವರ ಭಾಷೆ ಸುಸಂಸ್ಕೃತವಾಗಿಲ್ಲ. ಈ ಭಾಷೆ ಅವರ ಘನತೆಗೆ ಕುಂದು ಬರುತ್ತದೆ ಎಂದು ತಿಳಿಸಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post