ಕಲ್ಪ ಮೀಡಿಯಾ ಹೌಸ್ | ಕಡಲೂರು |
ಇಲ್ಲಿಗೆ ಸಮೀಪದ ಸರ್ಕಾರಿ ಶಾಲೆಯ ಶೌಚಾಲಯದ ಬಳಿಯಲ್ಲಿ ನವಜಾತ ಗಂಡು ಶಿಶುವಿನ ಶವ ಪತ್ತೆಯಾಗಿದ್ದು, ಅದೇ ಶಾಲೆಯಲ್ಲಿ ಓದುತ್ತಿದ್ದ 11ನೆಯ ತರಗತಿ ವಿದ್ಯಾರ್ಥಿನಿಯೊಬ್ಬಳೇ ಇದರ ತಾಯಿ ಎಂಬ ವಿಚಾರ ಹೊರಬಿದ್ದಿದೆ.
ಈ ಕುರಿತಂತೆ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದು, ಪತ್ತೆಯಾದ ಶಿಶುವಿನ ತಾಯಿಯಾದ 16 ವರ್ಷದ ಬಾಲಕಿಯನ್ನು ಪೊಲೀಸರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆರೋಗ್ಯ ತಪಾಸಣೆ ನಡೆಸಿದ್ದಾರೆ. ಅಲ್ಲದೇ, ಈಕೆ ಗರ್ಭ ಧರಿಸಲು ಕಾರಣವಾದ ವ್ಯಕ್ತಿಯ ಕುರಿತಾಗಿ ತನಿಖೆ ನಡೆಸುತ್ತಿದ್ದಾರೆ.
ಬಾಲಕಿ ತರಗತಿಗೆ ಹಾಜರಾಗುತ್ತಿದ್ದಾಗ ಹೆರಿಗೆ ನೋವು ಕಾಣಿಸಿಕೊಂಡು ಶೌಚಾಲಯಕ್ಕೆ ತೆರಳಿದ ವೇಳೆ ಮಗುವಿಗೆ ಜನ್ಮ ನೀಡಿದ್ದಾಗಿ ಬಾಲಕಿ ಪೊಲೀಸರಿಗೆ ಒಪ್ಪಿಕೊಂಡಿದ್ದಾಳೆ ಎಂದು ವರದಿಯಾಗಿದೆ.
Also read: CM to visit TK Halli to inspect the submerged water pumping station in Mandya district
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post