ಕಲ್ಪ ಮೀಡಿಯಾ ಹೌಸ್ | ಕುಕ್ಕೆ ಸುಬ್ರಹ್ಮಣ್ಯ(ದಕ್ಷಿಣ ಕನ್ನಡ) |
ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷದ ಮೈತ್ರಿ ಮಾಡಿಕೊಳ್ಳಲು ನಿರ್ಧಾರ ಮಾಡಿದ್ದು, ಸೀಟು ಹಂಚಿಕೆ ಕುರಿತಾಗಿ ಇನ್ನಷ್ಟೇ ಮಾತುಕತೆ ನಡೆಯಬೇಕಿದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾಣಿ ಎಚ್.ಡಿ. ದೇವೇಗೌಡ HDDevegowda ಹೇಳಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ Kukke Subramanya ಮಾತನಾಡಿದ ಅವರು, ಕುಮಾರಸ್ವಾಮಿಯವರು HDKumaraswamy ಈಗಾಗಲೇ ಗೃಹಮಂತ್ರಿ ಜೊತೆ ಚರ್ಚೆ ನಡೆಸಿದ್ದಾರೆ. ಸೀಟು ಹಂಚಿಕೆಯ ಬಗ್ಗೆ ಇನ್ನೂ ಚರ್ಚೆ ನಡೆಯಬೇಕಷ್ಟೇ. ದಸರಾ ಕಳೆದು ಸೀಟು ಹಂಚಿಕೆ ಚರ್ಚೆ ನಡೆಯಲಿದೆ ಎಂದಿದ್ದಾರೆ.
ಸೆಸ್ಸನ್ ಕಳೆದು ನನ್ನ ಆರೋಗ್ಯ ಸುಧಾರಿಸಿದರೆ ನಾನು ಅಥವಾ ಕುಮಾರಸ್ವಾಮಿ ಮತ್ತೆ ಗೃಹಮಂತ್ರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದಿದ್ದಾರೆ.
ಮೈತ್ರಿಗೆ ಮೊದಲು ಜೆಡಿಎಸ್ ನ 19 ಎಂಎಲ್’ಎ, 8 ಎಂಎಲ್’ಸಿ ಪಕ್ಷದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಜೊತೆ ಎರಡು ಸುತ್ತು ಮಾತುಕತೆ ನಡೆಸಲಾಗಿದೆ. ಅದು ನಡೆದ ಬಳಿಕ ಕುಮಾರಸ್ವಾಮಿ ಗೃಹಮಂತ್ರಿಗಳ ಭೇಟಿ ಮಾಡಿದ್ದಾರೆ ಎಂದರು.
ಹಿಂದಿನ ಚುನಾವಣೆಯ ಮತಗಳಿಕೆ ಒಟ್ಟು ಗೂಡಿಸಿ ಒಂದು ನಿರ್ಧಾರಕ್ಕೆ ಬರಲಾಗಿದೆ. ಆದರೆ ಯಾವ ಕ್ಷೇತ್ರ ಅನ್ನೋ ಬಗ್ಗೆ ಇನ್ನೂ ಫೈನಲ್ ಆಗಿಲ್ಲ. ಮಂಡ್ಯ ಸೇರಿದಂತೆ ಯಾವುದೇ ತೀರ್ಮಾನ ಆಗಿಲ್ಲ. ಸದ್ಯ ಹಾಸನ ಜೆಡಿಎಸ್, ರಾಮನಗರ ಕಾಂಗ್ರೆಸ್ ಕೈಯಲ್ಲಿದೆ. ಉಳಿದೆಡೆ ಬಿಜೆಪಿನೇ ಇದೆ. ಕಾಂಗ್ರೆಸ್ 28 ಗೆಲ್ಲುವ ಉತ್ಸಾಹದಲ್ಲಿದ್ದಾರೆ. ಆ ಕಾರಣಕ್ಕೆ ಬಿಜೆಪಿ, ಜೆಡಿಎಸ್ ಒಂದು ಗೂಡಿ ಹೋಗುವ ನಿರ್ಧಾರಕ್ಕೆ ಬಂದಿದ್ದೇವೆ ಎಂದಿದ್ದಾರೆ.
Also read: ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಸಿಕ್ಕಾಗ ಪ್ರಜಾಪ್ರಭುತ್ವ ಯಶಸ್ವಿ: ಸಚಿವ ಈಶ್ವರ ಖಂಡ್ರೆ
ಜಾತಿ ಆಧಾರದಲ್ಲಿ ಮತ ವಿಭಜನೆಯ ಬಗ್ಗೆ ನಾನು ಈಗ ವಾದ ಮಾಡಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶೇಕಡಾವಾರು ಮತ ಬಿಜೆಪಿಗೆ 30-33, ಕಾಂಗ್ರೆಸ್ 40, ಜೆಡಿಎಸ್ 20, 22 ಸಿಕ್ಕಿದೆ. ಈ ಬಾರಿಗೆ ಯಾರಿಗೆ ಓಟ್ ಮಾಡಬೇಕು ಅನ್ನೋದನ್ನ ಮತದಾರ ತೀರ್ಮಾನ ಮಾಡುತ್ತಾನೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post