ಕಲ್ಪ ಮೀಡಿಯಾ ಹೌಸ್ | ಕುಕ್ಕೆ ಸುಬ್ರಹ್ಮಣ್ಯ |
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ HDDevegowda ಹಾಗೂ ಪತ್ನಿ ಚೆನ್ನಮ್ಮ ಅವರು ಇಂದು ಕುಕ್ಕೆ ಸುಬ್ರಹ್ಮಣಕ್ಕೆ Kukke Subramanya ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ದೇವೇಗೌಡ ದಂಪತಿಗಳು ನಿನ್ನೆ ಮಧ್ಯಾಹ್ನ ಬೆಂಗಳೂರು ಎಚ್’ಎಎಲ್ ವಿಮಾನ ನಿಲ್ದಾಣದಿಂದ Bangalore HAL Airport ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತು. ಆದರೆ ಸಕಲೇಶಪುರ, ಸುಬ್ರಹ್ಮಣ್ಯ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದ ಕಾರಣದಿಂದಾಗಿ ಅದು ರದ್ದಾಯಿತು. ನಂತರದಲ್ಲಿ ವಿಮಾನ ಮೂಲಕ ಮಂಗಳೂರು ಆಗಮಿಸಿ ರಸ್ತೆ ಮಾರ್ಗವಾಗಿ ರಾತ್ರಿಯೇ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದರು.
ಇಂದು ಮುಂಜಾನೆ ದೇಗುಲಕ್ಕೆ ಆಗಮಿಸಿ ವಿಶೇಷ ಪೂಜೆಗಳನ್ನು ಸಲ್ಲಿಸುತ್ತಿದ್ದಾರೆ.
Also read: ನೆಹರು ಕ್ರೀಡಾಂಗಣದಲ್ಲಿ ರಂಗೇರಿದ ಚಿಣ್ಣರ ಕಲರವ | ಮಕ್ಕಳ ದಸರಾ ಕ್ರೀಡಾಕೂಟಕ್ಕೆ ಚಾಲನೆ
ತುಲಾಭಾರ ಸೇವೆ, ಆಶ್ಲೇಷ ಬಲಿ ಪೂಜೆಯನ್ನು ಎಚ್’ಡಿಡಿ ದಂಪತಿಗಳು ಮಾಡುತ್ತಿದ್ದಾರೆ. ಇದರೊಂದಿಗೆ ನಾಗರ ಪ್ರತಿಷ್ಠಾಪನೆ, ಮಹಾಪೂಜೆ ಸೇರಿದಂತೆ ಕೆಲವು ವಿಶೇಷ ಪೂಜೆಗಳಲ್ಲಿ ಅವರು ಭಾಗವಹಿಸಿ ಮಧ್ಯಾಹ್ನ ವೇಳೆಗೆ ಬೆಂಗಳೂರಿಗೆ ಅವರು ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post