ಕಲ್ಪ ಮೀಡಿಯಾ ಹೌಸ್ | ಕುಕ್ಕೆ ಸುಬ್ರಹ್ಮಣ್ಯ |
ದಕ್ಷಿಣ ಕನ್ನಡದ ಪ್ರಖ್ಯಾತ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ #Kukke Subramanya Temple ನವೆಂಬರ್ 14ರಿಂದ ಡಿಸೆಂಬರ್ 2ರವರೆಗೂ ಸರ್ಪ ಸಂಸ್ಕಾರ ಸೇವೆ ನೆರವೇರುವುದಿಲ್ಲ.
ಈ ಕುರಿತಂತೆ ದೇವಾಲಯದ ಪ್ರಕಟಣೆ ಮಾಹಿತಿ ಪ್ರಕಟಿಸಿದ್ದು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನವೆಂಬರ್ 16ರಿಂದ ಡಿಸೆಂಬರ್ 2ರವರೆಗೂ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ನವೆಂಬರ್ 14ರಿಂದ ಡಿಸೆಂಬರ್ 2ರ ತನಕ ಶ್ರೀ ದೇವಳದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪಸಂಸ್ಕಾರ ಸೇವೆ ಇರುವುದಿಲ್ಲ ಎಂದು ತಿಳಿಸಿದೆ.

ಇನ್ನು, ಚಂಪಾಷಷ್ಠಿ ಜಾತ್ರೋತ್ಸವವು ನವೆಂಬರ್ 16ರಿಂದ ಡಿಸೆಂಬರ್ 2ರವರೆಗೂ ನೆರವೇರಲಿದೆ. ಶ್ರೀಕ್ಷೇತ್ರದಲ್ಲಿ ಜಾತ್ರೋತ್ಸವದ ಪ್ರಧಾನ ದಿನಗಳಾದ ಲP್ಷÀದೀಪ, ಚೌತಿ, ಪಂಚಮಿ ಮತ್ತು ಷಷ್ಠಿಯಂದು ಮಾತ್ರ ಕೆಲವೊಂದು ಸೇವೆಗಳನ್ನು ನೆರವೇರಿಸಲು ಭಕ್ತರಿಗೆ ಅವಕಾಶಗಳು ಇರುವುದಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post