ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಲಕ್ನೋ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ಆಕೆಯ ತಂದೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಉತ್ತರ ಪ್ರದೇಶದ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸೆಂಗಾರ್ ಉನ್ನಾವ್’ಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
ಪ್ರಕರಣ ಕುರಿತಂತೆ ಇಂದು ತೀರ್ಪು ನೀಡಿರುವ ದೆಹಲಿ ನ್ಯಾಯಾಲಯ, ಆರೋಪಿಗಳಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ, ಸಂತ್ರಸ್ತೆಯ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದೆ.
ತೀರ್ಪು ನೀಡಿರುವ ನ್ಯಾಯಾಧೀಶ ಧರ್ಮೇಶ್ ಶರ್ಮಾ, ಅಪ್ರಾಪ್ತ ಸಂತ್ರಸ್ತೆ ತನ್ನ ತಂದೆಯನ್ನು ಕಳೆದುಕೊಂಡಿದ್ದಾಳೆ. ನಾಲ್ವರು ಅಪ್ರಾಪ್ತ ವಯಸ್ಕರನ್ನು ಹೊಂದಿರುವ ಇವರ ಕುಟುಂಬಕ್ಕೆ ಈಕೆ ಮರಳಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಆಕೆಗೆ ನ್ಯಾಯ ಒದಗಿಸುವ ಜೊತೆಯಲ್ಲಿ, ಪರಿಹಾರ ಅಗತ್ಯವನ್ನೂ ಸಹ ಉಲ್ಲೇಖಿಸಿದ್ದಾರೆ.
Get in Touch With Us info@kalpa.news Whatsapp: 9481252093
















