ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ (ಶಿವಮೊಗ್ಗ) |
ಕನ್ನಡ ನಾಡು, ನುಡಿ, ನೆಲ, ಜಲ ಹಾಗೂ ಸಂಸ್ಕೃತಿಯ ಪ್ರತೀಕವಾಗಿರುವ ಕನ್ನಡ ರಾಜ್ಯೋತ್ಸವವು ಕನ್ನಡಿಗರ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತವಾಗಿದೆ. ಕನ್ನಡ ಭಾಷೆಯು ಸಾವಿರಾರು ವರ್ಷಗಳ ಇತಿಹಾಸ, ಶ್ರೀಮಂತ ಸಾಹಿತ್ಯಿಕ ಪರಂಪರೆ ಹಾಗೂ ಅಪಾರ ಸಾಂಸ್ಕೃತಿಕ ವೈಭವವನ್ನು ಹೊಂದಿದೆ. ಕನ್ನಡ ಭಾಷೆಯ (Kannada Language) ಮೇಲಿನ ಅಭಿಮಾನ ಕೇವಲ ಮಾತುಗಳಿಗೆ ಸೀಮಿತವಾಗದೆ ನಮ್ಮ ನಡೆ-ನುಡಿಗಳಲ್ಲಿಯೂ ಪ್ರತಿಬಿಂಬಿಸಬೇಕು ಎಂದು ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ (Kumadvathi College) ಪ್ರಾಚಾರ್ಯ ಡಾ. ರವೀಂದ್ರ ಕೆ.ಸಿ. ಹೇಳಿದರು.
ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಭಾಷಾ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶುಭಾಶಯಗಳನ್ನು ಕೋರಿ ಅವರು ಮಾತನಾಡಿದರು.
ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉಳಿವು ಹಾಗೂ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇಂದಿನ ಯುವಪೀಳಿಗೆ ಕನ್ನಡ ಭಾಷೆಯ ಇತಿಹಾಸ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಅರಿತುಕೊಳ್ಳಬೇಕು. ಕನ್ನಡದ ಅಸ್ಮಿತೆಯನ್ನು ಕಾಪಾಡುವ ಜವಾಬ್ದಾರಿಯನ್ನು ಪ್ರತಿಯೊಬ್ಬರೂ ಅರಿತುಕೊಂಡು ಭಾಷೆಯ ಬೆಳವಣಿಗೆಗೆ ಕೈಜೋಡಿಸಬೇಕು ಎಂದು ತಿಳಿಸಿದರು.
Kumadvathi College: ಕನ್ನಡದ ಉಳಿವು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ
ಅಧ್ಯಾಪಕ ಡಾ. ಕೋಟೋಜಿರಾವ್ ಆರ್. ಮಾತನಾಡಿ, ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆ ಕೇವಲ ಸರ್ಕಾರದ ಜವಾಬ್ದಾರಿಯಲ್ಲ. ಅದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವೂ ಆಗಿದೆ. ನಮ್ಮ ದೈನಂದಿನ ಜೀವನದಲ್ಲಿ ಕನ್ನಡವನ್ನು ಪ್ರೀತಿಯಿಂದ ಬಳಸುವುದರ ಜತೆಗೆ ಇತರ ಭಾಷೆಗಳನ್ನೂ ಗೌರವಿಸುವ ವಿಶಾಲ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
Also Read>> ಕನ್ನಡದ ಉಳಿವು, ಬೆಳವಣಿಗೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯ: ಡಾ. ಎಂ.ಕೆ. ಭಟ್
ಕರ್ನಾಟಕ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ತ್ಯಾಗ, ಹೋರಾಟ ಹಾಗೂ ಅಮೂಲ್ಯ ಕೊಡುಗೆಗಳನ್ನು ಸ್ಮರಿಸಬೇಕು. ಅವರ ಪರಿಶ್ರಮದ ಫಲವಾಗಿ ಅಖಂಡ ಕರ್ನಾಟಕದ ನಿರ್ಮಾಣ ಸಾಧ್ಯವಾಯಿತು. ಇಂತಹ ಇತಿಹಾಸವನ್ನು ಯುವಜನತೆ ಅರಿತುಕೊಳ್ಳುವುದು ಅಗತ್ಯವಾಗಿದೆ. ಕನ್ನಡ ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಅಧ್ಯಯನ ಮಾಡುವ ಮೂಲಕ ಅವುಗಳ ಮಹತ್ವವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯದಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಅಭಿಲಾಷ್, ಬಾಲಾಜಿ, ಶರತ್ ಕುಮಾರ್, ರವಿ, ಸಂಜೀವಕುಮಾರ್, ಅಶ್ವಿನಿ, ಪೂರ್ಣಿಮಾ, ರಮ್ಯಾ, ರಕ್ಷಿತಾ, ಶಶಿಕಲಾ, ಅನುಷಾ, ಪಲ್ಲವಿ ಹಾಗೂ ನಹೀದಾ ಬಾನು ಉಪಸ್ಥಿತರಿದ್ದರು.
ಬೋಧಕೇತರ ಸಿಬ್ಬಂದಿಗಳಾದ ನಿರ್ಮಲಾ, ಹರ್ಷ ಸೇರಿದಂತೆ ಕಾಲೇಜಿನ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











