ಕಲ್ಪ ಮೀಡಿಯಾ ಹೌಸ್ | ಕುಂದಾಪುರ (ಉಡುಪಿ) |
ಕುಂದಾಪುರ (Kundapura) ತಾಲೂಕಿನ ಆರಾಟೆ ಸೇತುವೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ಕುಂದಾಪುರದ ಅಜಿತ್ ಪೌಲ್ ಲೂಯಿಸ್ ಎಂದು ಗುರುತಿಸಲಾಗಿದೆ.
ಸ್ಕೂಟರ್‌ಗೆ ಕಾರು ಡಿಕ್ಕಿ
ಅಜಿತ್ ಪೌಲ್ ಲೂಯಿಸ್ ಅವರು ಕುಂದಾಪುರದಿಂದ ತ್ರಾಸಿ ಕಡೆಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ತ್ರಾಸಿ ಕಡೆಯಿಂದ ಕುಂದಾಪುರದತ್ತ ಬರುತ್ತಿದ್ದ ಕಾರು ಸ್ಕೂಟರ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಕಾರನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಹೇಳಲಾಗಿದೆ.
Also Read>> ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿದ್ದ ವಿದ್ಯಾರ್ಥಿ; ಪೆರಿಬೈಲ್ ಬಳಿ ಮೃತದೇಹ ಪತ್ತೆ
Kundapura: ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಸವಾರ
ಅಪಘಾತದ ತೀವ್ರತೆಗೆ ಸ್ಕೂಟರ್ ಸವಾರ ಅಜಿತ್ ರಸ್ತೆಗೆ ಎಸೆಯಲ್ಪಟ್ಟಿದ್ದು, ಅವರ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿದ್ದವು. ಅಪಘಾತದ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಆಪತ್ಬಾಂಧವ ಆಂಬುಲೆನ್ಸ್ ಚಾಲಕ ಇಬ್ರಾಹಿಂ ಗಂಗೊಳ್ಳಿ ಮತ್ತು ತಂಡ ಗಾಯಾಳುವನ್ನು ತಕ್ಷಣ ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಆದರೆ, ಆಸ್ಪತ್ರೆಯಲ್ಲಿ ಗಾಯಾಳುವನ್ನು ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














