ಕಲ್ಪ ಮೀಡಿಯಾ ಹೌಸ್ | ಕುಂದಾಪುರ |
ಕಾರು, ಬೈಕ್ ಮತ್ತು ಬಸ್ ಮಧ್ಯೆ ಸಂಭವಿಸಿದ ಸರಣಿ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕುಂಭಾಶಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಕುಂಭಾಶಿ ಹೊಳೆಕಟ್ಟು ಸಮೀಪದ ನಿವಾಸಿ ಪ್ರಶಾಂತ್ ಪೂಜಾರಿ(25) ಎಂಬವರು ಮೃತಪಟ್ಟಿಟ್ಟಿದ್ದು, ಇನ್ನೋರ್ವ ವಿಘ್ನೇಶ್ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಹಿನ್ನೆಲೆ:
ಕುಂಭಾಶಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಸ್ಕೂಟರ್, ರಸ್ತೆಗೆ ಒಮ್ಮೇಲೆ ಅಡ್ಡ ಬಂದ ಕಾರಿಗೆ ಡಿಕ್ಕಿ ಹೊಡೆದು, ಅದೇ ದಿಕ್ಕಿನಿಂದ ಬರುತ್ತಿದ್ದ ಖಾಸಗಿ ಬಸ್ಸಿಗೆ ಕಾರು ಮತ್ತು ಬೈಕ್ ಡಿಕ್ಕಿ ಹೊಡೆಯಿತು. ಇದರ ಮಧ್ಯೆ ಸಿಲುಕಿದ ಸ್ಕೂಟರ್ ಸವಾರ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Also read: ಮಹಿಳೆಯರು ಆಯುಷ್ಮತಿ ಕ್ಲಿನಿಕ್‌ನ ಸದುಪಯೋಗ ಪಡೆದುಕೊಳ್ಳಿ: ಶಾಸಕ ಡಿ.ಎಸ್. ಅರುಣ್ ಕರೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















