ಕಲ್ಪ ಮೀಡಿಯಾ ಹೌಸ್ | ಕುಂದಾಪುರ |
ಹಿಜಾಬ್ ಮತ್ತು ಕೇಸರಿ ಶಾಲು ವಿವಾದವನ್ನು ಅಂತ್ಯಗೊಳಿಸಲು ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳಿಗೆ ಸಮವಸ್ತ್ರ ನೀತಿ ಸಂಹಿತೆಯನ್ನು ಕಡ್ಡಾಯಗೊಳಿಸಿರುವ ಬೆನ್ನಲ್ಲೆ ತಾಲೂಕಿನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇಂದು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿರುವ ಘಟನೆ ನಡೆದಿದೆ.
ತಾಲೂಕಿನ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಇದನ್ನು ಗಮನಿಸಿದ ಪ್ರಾಂಶುಪಾಲರು ಕೇಸರಿ ಶಾಲು ಧರಿಸಿ ಬಂದರೆ ತರತಿಗೆ ಪ್ರವೇಶಕ್ಕೆ ಅನುಮತಿ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿರುವುದಾಗಿ ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post