ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ರಾಜ್ಯ ಕುರುಬರ ಎಸ್’ಟಿ ಹೋರಾಟ ಸಮಿತಿ ವತಿಯಿಂದ ಕೇಂದ್ರ ಸಚಿವರನ್ನು ಭೇಟಿಯಾಗಿ, ಮನವಿ ಸಲ್ಲಿಸಿ, ಚರ್ಚೆ ನಡೆಸಲಾಯಿತು.
ಕಾಗಿನೆಲೆ ಕನಕಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಹೊಸದುರ್ಗ ಕಾಗಿನೆಲೆ ಕನಕಗುರುಪೀಠ ಶಾಖಾಮಠದ ಈಶ್ವರಾನಂದಪುರಿ ಸ್ವಾಮೀಜಿ, ಶಿವಾನಂದಪುರಿ ಮಹಾಸ್ವಾಮಿಗಳು ಸಿದ್ದರಾಮಾನಂದಪುರಿ ಸ್ವಾಮೀಜಿಯವರ ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದ ತಂಡ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಸಮಾಜ ಕಲ್ಯಾಣ ಸಚಿವ ಅರ್ಜುನ ಮುಂಡಾ ಮತ್ತು ಹಿರಿಯ ನಾಯಕರುಗಳನ್ನು ಭೇಟಿ ಮಾಡಿ ಈ ವಿಷಯದ ಕುರಿತು ಮಾಹಿತಿ ನೀಡಿದರು. ಕುರುಬ ಸಮಾಜದ ಇತಿಹಾಸದ ಬಗ್ಗೆ ಹಾಗೂ ಎಸ್’ಟಿಗೆ ಸೇರಿಸುವ ಅವಶ್ಯಕತೆ ಕುರಿತು ವಿವರಿಸಿದರು.
ಮಾಜಿ ಸಚಿವರು ಮತ್ತು ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್, ಮಾಜಿ ಸಚಿವ ಎಚ್.ಎಂ. ರೇವಣ್ಣ, ಮಾಜಿ ಸಚಿವರು ಮತ್ತು ಶಾಸಕ ಬಂಡೆಪ್ಪ ಕಾಶ್ಯಂಪೂರ್, ಮಾಜಿ ಸಂಸದರು ಮತ್ತು ಹೋರಾಟ ಸಮಿತಿ ಅಧ್ಯಕ್ಷ ಕೆ. ವಿರುಪಾಕ್ಷಪ್ಪ, ಸಮಿತಿಯ ಕಾರ್ಯಾಧ್ಯಕ್ಷ ಕೆ. ಮುಕುಡಪ್ಪರವರು, ಕುರುಬರ ಸಂಘದ ಕಾರ್ಯಾಧ್ಯಕ್ಷ ಸುಬ್ರಹ್ಮಣ್ಯ, ಪ್ರಧಾನ ಕಾರ್ಯದರ್ಶಿ ಡಿ. ವೆಂಕಟೇಶಮೂರ್ತಿ, ಸಮಿತಿ ಖಜಾಂಚಿ ಕೆ.ಈ. ಕಾಂತೇಶ, ಪ್ರಮುಖರಾದ ಟಿ.ಬಿ. ಬಳಗಾವಿ, ಪುಟ್ಟಸ್ವಾಮಿ, ಮತ್ತು ಸಮಿತಿ ಪ್ರಧಾನ ಕಾರ್ಯದರ್ಶಿಯಾದ ಆನೇಕಲ್ ದೊಡ್ಡಯ್ಯ ಹಾಗೂ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post