ಆ.16ರ ನಾಳೆ ನಡೆಯಬೇಕಿದ್ದ ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ನಾಳೆ ನಡೆಯಬೇಕಾಗಿದ್ದ ಎಂಎಸ್ಸಿ (ಹಾನರ್ಸ್) ಮತ್ತು ಪಿಎಚ್’ಡಿ ಕೋರ್ಸ್ ವರ್ಕ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಕುರಿತಂತೆ ಪರೀಕ್ಷಾಂಗ ಕುಲಸಚಿವ ಪ್ರೊ.ಎಸ್.ಕೆ. ನವೀನ್ ಕುಮಾರ್ ಮಾಹಿತಿ ನೀಡಿದ್ದು, ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಜಿಲ್ಲಾಧಿಕಾರಿಗಳು ಆಗಸ್ಟ್ 16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ನಾಳೆ ನಡೆಯಬೇಕಾಗಿದ್ದ ಎಂಎಸ್ಸಿ (ಹಾನರ್ಸ್) ಮತ್ತು ಪಿಎಚ್’ಡಿ ಕೋರ್ಸ್ ವರ್ಕ್ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದಿದ್ದಾರೆ.
Discussion about this post