ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ರಾಜ್ಯದ ಉನ್ನತ ಶಿಕ್ಷಣ ಇಲಾಖೆ, ಕುವೆಂಪು ವಿಶ್ವವಿದ್ಯಾಲಯ ಮತ್ತು ಅಮೆರಿಕಾದ ಅಥೆನ್ಸ್ ವಿಶ್ವವಿದ್ಯಾಲಯಗಳು ತ್ರಿಸದಸ್ಯ ಶೈಕ್ಷಣಿಕ – ಸಂಶೋಧನಾ ಕಾರ್ಯಕ್ರಮದ ಒಪ್ಪಂದವೊಂದಕ್ಕೆ ಸಹಿ ಹಾಕಲಿವೆ.
Also Read: ಭಾವೊದ್ವೇಗ ಬೇಡ, ಶಾಂತಿ ಕಾಪಾಡಿ, ಪೊಲೀಸರೊಂದಿಗೆ ಸಹಕರಿಸಿ: ಇದು ಕಲ್ಪ ಮೀಡಿಯಾ ಹೌಸ್ ಕಳಕಳಿ
ಮಂಗಳವಾರ ಸಂಜೆ 8 ಗಂಟೆಗೆ ಆನ್ಲೈನ್ ಮೂಲಕ ನಡೆಯುವ ಸಭೆಯಲ್ಲಿ ಮೂರೂ ಸಂಸ್ಥೆಗಳ ಗಣ್ಯರು, ತಜ್ಞರು ಭಾಗವಹಿಸಲಿದ್ದು ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಗಳಿಗೆ ಪರಸ್ಪರ ಸಹಕಾರ ನೀಡುವ ಒಪ್ಪಂದವನ್ನು ಜಾರಿಗೊಳಿಸಲಿದ್ದಾರೆ.ಈ ಒಪ್ಪಂದದಡಿ ಅಲಬಾಮದಲ್ಲಿರುವ ಅಥೆನ್ಸ್ ವಿವಿ ಮತ್ತು ಕುವೆಂಪು ವಿವಿಗಳ ನಡುವೆ ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಗಳನ್ನು ಕೈಗೊಳ್ಳಲು ಬೋಧಕರು ಮತ್ತು ವಿದ್ಯಾರ್ಥಿಗಳ ವಿನಿಮಯ, ಉಭಯ ಸಂಸ್ಥೆಗಳಿಂದ ವಿಶೇಷ ವಿಷಯಗಳ ಮೇಲೆ ಪದವಿಗಳ ಆರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
Also Read: ನಿಮಗಿಂತ ಜಾಸ್ತಿ ನನಗೆ ಸಿಟ್ಟಿದೆ, ನೀವು ಹೇಳಿದಂತೆ ಎನ್’ಕೌಂಟರ್ ಮಾಡೋಕಾಗಲ್ಲ: ಈಶ್ವರಪ್ಪ ಖಡಕ್ ಮಾತು
ಆನ್ಲೈನ್ ಸಭೆಯಲ್ಲಿ ರಾಜ್ಯದ ಉನ್ನತ ಶಿಕ್ಷಣ ಸಚಿವರಾದ ಡಾ. ಸಿ. ಎನ್. ಅಶ್ವತ್ಥನಾರಾಯಣ್, ಕರ್ನಾಟಕ ಉನ್ನತ ಶಿಕ್ಷಣ ಮಂಡಳಿಯ ಉಪಾಧ್ಯಕ್ಷ ಪ್ರೊ. ಬಿ. ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕರಾದ ಪ್ರೊ. ಗೋಪಾಲಕೃಷ್ಣ ಜೋಶಿ, ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯ್ಕ್ ಜಿ. ಕುವೆಂಪು ವಿವಿ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ, ಕುಲಸಚಿವೆ ಅನುರಾಧ ಜಿ., ಪರೀಕ್ಷಾಂಗ ಕುಲಸಚಿವ ಪ್ರೊ. ಸಿ. ಎಂ. ತ್ಯಾಗರಾಜ್ ಹಾಗೂ ಅಲಬಾಮದ ಅಥೆನ್ಸ್ ವಿವಿಯ ಅಧ್ಯಕ್ಷ ಡಾ. ಫಿಲಿಪ್ ವೇ, ಉಪಾಧ್ಯಕ್ಷ ಡಾ. ಕ್ಯಾಥರೀನ್ ವೆಲ್ಬರ್ಗ್ ಸೇರಿದಂತೆ ಇತರ ತಜ್ಞರು, ಸದಸ್ಯರು ಹಾಜರಿರಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post