Read - < 1 minute
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕುವೆಂಪು ವಿಶ್ವವಿದ್ಯಾಲಯದ ಭೂಮಿ ಪರಭಾರೆ ಅವಧಿಯನ್ನು ಮುಂದುವರೆಸುವ ಕುರಿತಾಗಿದ್ದ ಸಮಸ್ಯೆ ಪರಿಹಾರದ ಹಂತಕ್ಕೆ ಬಂದು ತಲುಪಿದೆ ಎಂದು ನಿರೀಕ್ಷಿಸಲಾಗಿದೆ.
ಈ ವಿಚಾರ ಕುರಿತಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಶಾಸಕರಾದ ಆರಗ ಜ್ಞಾನೇಂದ್ರ, ಹಾಲಪ್ಪ ಅವರುಗಳು ಸಮ್ಮುಖದಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಚರ್ಚಿಸಿದ್ದಾರೆ.
ಬೆಂಗಳೂರಿನ ಕೃಷ್ಣ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ಭೂಮಿ ಪರಬಾರೆ ಅವಧಿಯನ್ನು ಮುಂದುವರೆಸುವ ಬಗ್ಗೆ ಅರಣ್ಯ ಇಲಾಖೆ ಮತ್ತು ವಿಶ್ವವಿದ್ಯಾಲಯ ಮಧ್ಯೆ ಇದ್ದ ಸಮಸ್ಯೆಯ ಕುರಿತಂತೆ ಸುದೀರ್ಘವಾಗಿ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಸಮಸ್ಯೆ ಪರಿಹಾರ ಮಾಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ತೀರ್ಮಾನ ಕೈಗೊಳ್ಳಲಾಯಿತು.
ಸಭೆಯಲ್ಲಿ ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವ ಕುಮಾರ್, ಪಿಸಿಸಿಎಫ್ ವೈಲ್ಡ್ ಲೈಫ್ ಸಂಜಯ್ ಮೋಹನ್, ಕುವೆಂಪು ವಿವಿ ಕುಲಪತಿ ವೀರಭದ್ರಪ್ಪ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Get in Touch With Us info@kalpa.news Whatsapp: 9481252093
Discussion about this post