ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಮಾಧ್ಯಮಗಳಲ್ಲಿ ಬಳಸುವ ಭಾಷೆಗಳ ಬಗ್ಗೆ ಬಹಳಷ್ಟು ಎಚ್ಚರಿಕೆ ವಹಿಸಬೇಕಿದ್ದು, ಪತ್ರಿಕೋದ್ಯಮ ವಿದ್ಯಾರ್ಥಿಗಳು ಇದರ ಬಗ್ಗೆ ಹೆಚ್ಚಾಗಿ ತಿಳಿದುಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಗಣೇಶ್ ಅಜ್ಜಿಮನೆ ಹೇಳಿದರು.
ಕುವೆಂಪು ವಿವಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ನ್ಯೂಸ್ ಸ್ಕ್ರಿಪ್ಟ್ ಬರವಣಿಗೆ ಕುರಿತು ಪತ್ರಿಕೋದ್ಯಮ ವಿಭಾಗ ಮತ್ತು ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಉತ್ತಮ ಸಮಾಜ ನಿರ್ಮಾಣದಲ್ಲಿ ಪತ್ರಿಕೋದ್ಯಮದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಪತ್ರಕರ್ತರು ಪ್ರತಿ ಪದಗಳನ್ನು ಬಳಸುವಾಗಿ ಹೆಚ್ಚಿನ ಜಾಗ್ರತೆ ವಹಿಸಬೇಕು ಎಂಬುದನ್ನು ವಿದ್ಯಾರ್ಥಿ ಹಂತದಿಂದಲೇ ರೂಢಿಸಿಕೊಳ್ಳಬೇಕು ಎಂದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post