No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನೂತನ ಶಿಕ್ಷಣ ನೀತಿಯಿಂದ ಉದ್ಯೋಗಾವಕಾಶ ಹೆಚ್ಚಲಿದೆ: ಪ್ರೊ.ವೈ.ಎಸ್. ಸಿದ್ದೇಗೌಡ

ಕುವೆಂಪು ವಿವಿ: ಸಮಾಜಕಾರ್ಯ ವಿಭಾಗದ ವತಿಯಿಂದ ನೂತನ ಶಿಕ್ಷಣ ನೀತಿ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

kalpa News by kalpa News
March 17, 2022
in ಶಿವಮೊಗ್ಗ
0
ನೂತನ ಶಿಕ್ಷಣ ನೀತಿಯಿಂದ ಉದ್ಯೋಗಾವಕಾಶ ಹೆಚ್ಚಲಿದೆ: ಪ್ರೊ.ವೈ.ಎಸ್. ಸಿದ್ದೇಗೌಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಸರ್ಕಾರ ಜಾರಿಗೆ ತಂದಿರುವ ನೂತನ ಶಿಕ್ಷಣ ನೀತಿಯು ವಿದ್ಯಾರ್ಥಿ ಕೇಂದ್ರಿತವಾಗಿದ್ದು, ಹೊಸ ಅವಕಾಶಗಳ ಬಾಗಿಲು ತೆರೆಯಲಿದೆ. ಪದವಿ ಹಂತದಲ್ಲಿಯೇ ಅಂತರ್‍ಶಿಸ್ತೀಯ ಅಧ್ಯಯನ ಕೈಗೊಳ್ಳಲು ನೆರವಾಗುವುದರ ಜೊತೆಗೆ ಉದ್ಯೋಗ ಕೇಂದ್ರಿತ ಕೌಶಲ್ಯಗಳನ್ನು ಕಲಿಯಲು ವಿದ್ಯಾರ್ಥಿಗಳಿಗೆ #Students ಅನುವು ಮಾಡಿಕೊಡಲಿದೆ. ಇದರಿಂದಾಗಿ ಭವಿಷ್ಯದಲ್ಲಿ ಉದ್ಯೋಗಾವಕಾಶಗಳು ಹೆಚ್ಚಳವಾಗಲಿದೆ ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವೈ. ಎಸ್. ಸಿದ್ದೇಗೌಡ ಅಭಿಪ್ರಾಯಪಟ್ಟರು.

Also Read: ಅತಿಯಾದ ಕಲ್ಲು ಸಾಗಾಣಿಕೆ, ಸ್ಫೋಟದಿಂದ ಕೃಷಿ ಚಟುವಟಿಕೆಗೆ ಹಿನ್ನೆಡೆ: ಬಸ್ತಿಕೊಪ್ಪ ಗ್ರಾಮಸ್ಥರ ಅಳಲು

ಕುವೆಂಪು ವಿಶ್ವವಿದ್ಯಾಲಯದ #KuvempuUniversity ಸಮಾಜ ಕಾರ್ಯ ವಿಭಾಗವು ಗುರುವಾರ ಬಸವ ಭವನದಲ್ಲಿ, ‘ನೂತನ ಶಿಕ್ಷಣ ನೀತಿ ಮತ್ತು ಸಮಾಜಕಾರ್ಯ’ ಕುರಿತು ಆಯೋಜಿಸಿದ್ದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನೂತನ ಶಿಕ್ಷಣ ನೀತಿಯ #NewEducationPolicy ಅನುಷ್ಠಾನದ ಆರಂಭಿಕ ಹಂತದಲ್ಲಿರುವುದರಿಂದ ಸಾಂಪ್ರದಾಯಿಕವಾಗಿ ಬೋಧಿಸಲಾಗುತ್ತಿದ್ದ ಪಠ್ಯಕ್ರಮವನ್ನು ಹೊಸ ಮಾದರಿಗೆ ಅಳವಡಿಸಬೇಕಾದ ಅನಿವಾರ್ಯತೆ ಇದೆ. ಇದೇ ಕಾರಣದಿಂದ ಸರ್ಕಾರ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ನೆರವಾಗುವ ಉದ್ದೇಶದಿಂದ ಮಾದರಿ ಪಠ್ಯಕ್ರಮ ರಚನೆಗೆ ಸಮಿತಿಗಳನ್ನು ರಚಿಸಿತ್ತು.

Also Read: 15 ದಿನದಲ್ಲಿ ಸರ್ಕಾರಿ ಬಂಗಲೆ ಖಾಲಿ ಮಾಡಿ: ಶರದ್ ಯಾದವ್’ಗೆ ಕೋರ್ಟ್ ವಾರ್ನಿಂಗ್

ಸಮಾಜ ವಿಜ್ಞಾನಗಳ ಪಠ್ಯಕ್ರಮ ರಚನಾ ಸಮಿತಿಯ ಅಧ್ಯಕ್ಷರಾಗಿ ಸರ್ಕಾರ ತಮ್ಮನ್ನು ನೇಮಿಸಿದಾಗ, ವಿಶ್ವವಿದ್ಯಾಲಯಗಳ ಅಧ್ಯಯನ ಮಂಡಳಿಗಳಿಗೆ ನೆರವು ಒದಗಿಸುವ ಉದ್ದೇಶದಿಂದ ಮಾದರಿ ಪಠ್ಯಕ್ರಮವನ್ನು ರಚಿಸಿ ಕಳುಹಿಸಿಕೊಡಲಾಯಿತು. ಆದರೆ ನೂತನ ಶಿಕ್ಷಣ ನೀತಿಯ ಪ್ರಕಾರ ಆಯಾ ವಿಶ್ವವಿದ್ಯಾಲಯಗಳು #University ಈ ಮಾದರಿ ಸಂರಚನೆ ಮತ್ತು ವಿಷಯಗಳ ಶೀರ್ಷಿಕೆಗಳನ್ನು ಉಳಿಸಿಕೊಂಡು ಪಠ್ಯಕ್ರಮದಲ್ಲಿ ಬದಲಾವಣೆ ಮಾಡಿಕೊಳ್ಳಲು ಅವಕಾಶವಿದೆ ಎಂದರು.
ಬೆಂಗಳೂರು ನಗರ ವಿಶ್ವವಿದ್ಯಾಲಯದ #BengaluruUniversity ಪರೀಕ್ಷಾಂಗ ಕುಲಸಚಿವ ಪ್ರೊ. ಬಿ. ರಮೇಶ್ ಮಾತನಾಡಿ, ನೂತನ ಶಿಕ್ಷಣ ನೀತಿ ಇತರ ಎಲ್ಲ ವಿಷಯಗಳಂತೆ ಸಮಾಜ ಕಾರ್ಯ ವಿಷಯಕ್ಕೂ ಹೊಸ ಸಾಧ್ಯತೆಗಳನ್ನು ಸೃಷ್ಟಿಸಿದೆ. ಸಮಾಜದ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ಕಾರ್ಯನಿರ್ವಹಿಸುವ ಕ್ರಿಯಾತ್ಮಕ ಕಾರ್ಯದಲ್ಲಿ ಸಮಾಜ ಕಾರ್ಯ ಪದವೀಧರರು ವೃತ್ತಿಪರ ಸೇವೆ ಒದಗಿಸುತ್ತಾ ಬಂದಿದ್ದಾರೆ. ಹೊಸದಾಗಿ ಅಳವಡಿಸಿಕೊಂಡಿರುವ ಅಂತರ್‍ಶಿಸ್ತೀಯ ಅಧ್ಯಯನವು ಸಮಾಜ ಕಾರ್ಯ ಪದವೀಧರರ ಲೋಕದೃಷ್ಟಿಯನ್ನು ಇನ್ನಷ್ಟು ವಿಸ್ತರಿಸಲಿದೆ ಎಂದರು.

ನಾಲ್ಕು ದತ್ತಿನಿಧಿ ಸ್ವರ್ಣಪದಕ ನೀಡಿರುವ ಸೋಮಶೇಖರ್ ಗೆ ಸನ್ಮಾನ

ಕುವೆಂಪು ವಿಶ್ವವಿದ್ಯಾಲಯದ ನಾಲ್ಕು ನಿಕಾಯಗಳಲ್ಲಿ ತಲಾ ಒಂದೊಂದು ದತ್ತಿನಿಧಿ ಸ್ವರ್ಣಪದಕವನ್ನು ಸ್ಥಾಪಿಸಿರುವ ಅಭಿವೃದ್ಧಿ ವಿಭಾಗದ ಹಿರಿಯ ಸಹಾಯಕ ಪಿ. ಸಿ. ಸೋಮಶೇಖರ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಸಮಾಜಕಾರ್ಯ ವಿಭಾಗ, ಎಂಎಡ್, ಔದ್ಯೋಗಿಕ ರಸಾಯನ ಶಾಸ್ತ್ರ ಮತ್ತು ವಾಣಿಜ್ಯ ಶಾಸ್ತ್ರ ವಿಭಾಗಗಳ ಮೊದಲ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ‘ಸೋಮಶೇಖರ್ ಪಿ.ಸಿ. S/O ಪರಶುರಾಮಪ್ಪ ಬಿ. ಎಚ್’ ಹೆಸರಿನಲ್ಲಿ ತಲಾ ಒಂದು ಲಕ್ಷ ಠೇವಣ ನೀಡಿ, ದತ್ತಿನಿಧಿ ಸ್ವರ್ಣ ಪದಕಗಳನ್ನು ಸ್ಥಾಪಿಸಿದ್ದಾರೆ. ಬರುವ ಜುಲೈ ತಿಂಗಳಲ್ಲಿ ನಿವೃತ್ತರಾಗಲಿರುವ ಸೋಮಶೇಖರ್, ಕರ್ತವ್ಯಕ್ಕೆ ವರದಿ ಮಾಡಿಕೊಂಡ ಮೊದಲ ದಿನದಿಂದ ಇದುವರೆಗೆ ಒಂದು ದಿನದ ರಜೆಯ ಸೌಲಭ್ಯವನ್ನೂ ಬಳಸಿಕೊಂಡಿಲ್ಲ ಎಂಬುದು ವಿಶೇಷ. ಇವರ ಸೇವೆಯನ್ನು ಪರಿಗಣಿಸಿ ವಿಶ್ವವಿದ್ಯಾಲಯ ಈ ಹಿಂದೆ ‘ಸಾಧನಾ ಪುರಸ್ಕಾರ’ ನೀಡಿ ಗೌರವಿಸಿದೆ.

ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಮಾತನಾಡಿ, ಸಮಾಜದ ಎಲ್ಲ ರಂಗಗಳಲ್ಲಿ ಮೌಲ್ಯಗಳ ಅಧಃಪತನವಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಹೊಸ ಶಿಕ್ಷಣ ನೀತಿಯ ಸಾಧ್ಯತೆಗಳನ್ನು ಅಳವಡಿಸಿಕೊಂಡು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಹೀಗೆ ಎಲ್ಲ ವರ್ಗಗಳನ್ನು ಮೇಲೆತ್ತುವ ಗುರುತರ ಜವಾಬ್ದಾರಿಯನ್ನು ಸಮಾಜ ಕಾರ್ಯದ ವೃತ್ತಿಪರರು ನಿರ್ವಹಿಸಬೇಕಿದೆ. ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ತಳಹಂತದಲ್ಲಿ ಕಾರ್ಯನಿರ್ವಹಿಸುವ ಸಾಮಾಜಿಕ ಕಾರ್ಯಕರ್ತರು ರಾಷ್ಟ್ರದ ಅಭಿವೃದ್ಧಿಗೆ ಇಂಬುಕೊಡುವ ತೆರೆಮರೆಯ ನಾಯಕರು ಎಂದು ಶ್ಲಾಘಿಸಿದರು.ಸಮಾಜಕಾರ್ಯ ವಿಭಾಗದ ಅಧ್ಯಕ್ಷ ಪ್ರೊ. ಎ. ರಾಮೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಸಂಗೀತಾ ಮಾನೆ, ಪ್ರೊ. ಪರಶುರಾಮ ಕೆ. ಜಿ., ಪ್ರೊ. ಲೋಕೇಶ ವಿಚಾರ ಮಂಡಿಸಿದರು. ಪ್ರೊ. ಗುರುಲಿಂಗಯ್ಯ, ಪ್ರೊ. ಈ. ಚಂದ್ರಶೇಖರ್, ಡಾ. ಸಂಧ್ಯಾ ಕಾವೇರಿ, ಪ್ರೊ. ಅಂಜನಪ್ಪ, ಡಾ. ದಿಲೀಪ್ ಕುಮಾರ್, ಡಾ. ಸರವಣ, ಡಾ. ರವಿಶಂಕರ್, ಡಾ. ಮಹೇಶ್, ಶ್ರೀಧರ್, ಸುನಿತಾ, ನೇತ್ರಾವತಿ, ವಿವಿಧ ವಿಶ್ವವಿದ್ಯಾಲಯಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKuvempu UniversityLatest News KannadaLocal NewsMalnad NewsNew Education PolicyShimogaShivamoggaShivamogga NewsTumkur UniversityUniversityಕುವೆಂಪು ವಿಶ್ವವಿದ್ಯಾಲಯತುಮಕೂರು ವಿಶ್ವವಿದ್ಯಾಲಯನೂತನ ಶಿಕ್ಷಣ ನೀತಿಮಲೆನಾಡು ಸುದ್ಧಿವಿಶ್ವವಿದ್ಯಾಲಯಶಿವಮೊಗ್ಗ ನ್ಯೂಸ್ಸಮಾಜಕಾರ್ಯ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅತಿಯಾದ ಕಲ್ಲು ಸಾಗಾಣಿಕೆ, ಸ್ಫೋಟದಿಂದ ಕೃಷಿ ಚಟುವಟಿಕೆಗೆ ಹಿನ್ನೆಡೆ: ಬಸ್ತಿಕೊಪ್ಪ ಗ್ರಾಮಸ್ಥರ ಅಳಲು

Next Post

ಮಾರ್ಚ್ 18ರಂದು ಶ್ರೀ ಬಾಲಸುಬ್ರಮಣ್ಯಸ್ವಾಮಿಯ ರಥೋತ್ಸವ

kalpa News

kalpa News

Next Post
ಮಾರ್ಚ್ 18ರಂದು ಶ್ರೀ ಬಾಲಸುಬ್ರಮಣ್ಯಸ್ವಾಮಿಯ ರಥೋತ್ಸವ

ಮಾರ್ಚ್ 18ರಂದು ಶ್ರೀ ಬಾಲಸುಬ್ರಮಣ್ಯಸ್ವಾಮಿಯ ರಥೋತ್ಸವ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL