ಕಲ್ಪ ಮೀಡಿಯಾ ಹೌಸ್ | ಲಡಾಖ್ |
ಲಡಾಖ್‌ನ ನ್ಯೋಮಾ-ಚುಶುಲ್ ಪ್ರದೇಶದ ವಾಸ್ತವ ನಿಯಂತ್ರಣ ರೇಖೆ ಬಳಿ ನದಿ ದಾಟುತ್ತಿದ್ದ ಸಂದರ್ಭದಲ್ಲಿ ಹಠಾತ್ ಪ್ರವಾಹ #Flash flood ಉಂಟಾಗಿದ ಪರಿಣಾಮ ಐವರು ಯೋಧರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಲಡಾಖ್ ನ ವಾಸ್ತವ ನಿಯಂತ್ರಣ ರೇಖೆ (ಎಲ್ ಎಸಿ) ಬಳಿ ಈ ದುರ್ಘಟನೆ ಸಂಭವಿಸಿದ್ದು, ಶನಿವಾರ ಮುಂಜಾನೆ ಲಡಾಖ್‌ನ ನ್ಯೋಮಾ-ಚುಶುಲ್ ಪ್ರದೇಶದ ವಾಸ್ತವ ನಿಯಂತ್ರಣ ರೇಖೆ (ಎಲ್ ಎಸಿ) ಬಳಿ T-72 ಟ್ಯಾಂಕ್ ನಲ್ಲಿ ಲೇಹ್‌ನಿಂದ 148 ಕಿಲೋಮೀಟರ್ ದೂರದಲ್ಲಿರುವ ಮಂದಿರ್ ಮೋರ್ ಸಮೀಪ ಬೆಳಗ್ಗೆ 1 ಗಂಟೆ ಸುಮಾರಿಗೆ ಟ್ಯಾಂಕ್ ನೊಂದಿಗೆ ನದಿಯನ್ನು ದಾಟುವ ಅಭ್ಯಾಸ ನಡೆಸುತ್ತಿದ್ದಾಗ ಸೇನಾ ಟ್ಯಾಂಕ್ ಅಪಘಾತಕ್ಕೀಡಾಗಿ, ನದಿಯ ಆಳವಾದ ಭಾಗದಲ್ಲಿ ಸಿಲುಕಿಕೊಂಡಿತ್ತು. ಈ ವೇಳೆ ಏಕಾಏಕಿ ನೀರಿನ ಮಟ್ಟ ಏರಿದ್ದರಿಂದ ಸೈನಿಕರು ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ.
Also read: ಶಿವಮೊಗ್ಗ | ಭದ್ರಾ ಅಣೆಕಟ್ಟೆಗೆ ಒಂದೇ ದಿನ 1 ಅಡಿ ನೀರು | ಜಿಲ್ಲೆಯ ಯಾವ ಡ್ಯಾಂನಲ್ಲಿ ಎಷ್ಟು ಸಂಗ್ರಹವಿದೆ?
ಕೇಂದ್ರ ಸಚಿವ ರಾಜನಾಥ್ ಸಿಂಗ್ ಸಂತಾಪ:
ಘಟನೆ ಬಗ್ಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ #Rajnath Singh ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ʼʼಲಡಾಕ್‌ನಲ್ಲಿ ನದಿ ದಾಟುವಾಗ ಸಂಭವಿಸಿದ ಅಪಘಾತದಲ್ಲಿ ನಮ್ಮ ಐವರು ಧೈರ್ಯಶಾಲಿ ಸೈನಿಕರು ಪ್ರಾಣ ಕಳೆದುಕೊಂಡಿರುವುದು ತೀವ್ರ ದುಃಖ ತಂದಿದೆ. ನಮ್ಮ ಸೈನಿಕರು ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ಈ ದುಃಖದ ಸಮಯದಲ್ಲಿ ರಾಷ್ಟ್ರವು ಅವರೊಂದಿಗೆ ದೃಢವಾಗಿ ನಿಲ್ಲುತ್ತದೆʼʼ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post