ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಮಂಡ್ಯದಲ್ಲಿ ಕುಮಾರಸ್ವಾಮಿ ನಿಲ್ಲಬೇಕು ಎಂಬ ಕಾರ್ಯಕರ್ತರ ಒತ್ತಡವಿದ್ದು, ಕಳೆದ ಬಾರಿಯ ಲೋಕಸಭೆ ಎಲೆಕ್ಷನ್ ಬೇರೆ, ಈ ಚುನಾವಣೆಯೇ ಬೇರೆ. ಇದೀಗ ಮಂಡ್ಯದಲ್ಲಿ ಓರ್ವ ಸಾಮಾನ್ಯ ಕಾರ್ಯಕರ್ತ ಗೆಲ್ಲುವ ವಾತಾವರಣ ಇದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ HD Kumaraswamy ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಮಂಡ್ಯ ಒಂದಲ್ಲ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ನಡೆಸಲಾಗಿದ್ದು, ನಮ್ಮ ಅಭ್ಯರ್ಥಿಗಳನ್ನು ಯಾವ ರೀತಿ ವಿಶ್ವಾಸ ತೆಗೆದುಕೊಳ್ಳಬೇಕು ಎಂಬ ಚರ್ಚೆ ನಡೆದಿದೆ ಎಂದಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿದರೂ ಜೆಡಿಎಸ್ ಅಭ್ಯರ್ಥಿ ಗೆಲುವು ಸಾಧಿಸುವುದು ನಿಶ್ಚಿತ ಎಂದಿದ್ದಾರೆ.
Also read: ಯಕಶ್ಚಿತ್ ಸಾಸ್ ಕೇಳಿದ್ದಕ್ಕಾಗಿ ಗ್ರಾಹಕ ಮುಖಕ್ಕೆ ಚಾಕು ಇರಿದ ವ್ಯಕ್ತಿ
ಕಳೆದ ಬಾರಿ ಲೋಕಸಭಾ ಚುನಾವಣೆಗೂ, ಈ ಬಾರಿಯ ಚುನಾವಣೆಗೂ ಬಹಳಷ್ಟು ವ್ಯತ್ಯಾಸವಿದೆ. ಕಳೆದ ಬಾರಿ ರೈತ ಸಂಘ, ಬಿಜೆಪಿ, ಕಾಂಗ್ರೆಸ್ ಎಲ್ಲರೂ ಪಕ್ಷೇತರ ಅಭ್ಯರ್ಥಿ ಪರ ಮತ ಹಾಕಿದ್ದಾರೆ. ಜೆಡಿಎಸ್ ಬಿಟ್ಟು 2 ರಿಂದ 3 ಪರ್ಸೆಂಟ್ ಮತದಾರರು ಮಾತ್ರ ನಮ್ಮ ಪರ ಇದ್ದರು. ಈಗ ಮಂಡ್ಯದಲ್ಲಿ ಆ ವಾತಾವರಣ ಇಲ್ಲ ಎಂದರು.
ಈಗ ಓರ್ವ ಸಾಮಾನ್ಯ ಕಾರ್ಯಕರ್ತ ಕೂಡ ಸ್ಪರ್ಧಿಸಿದರೂ ಕೂಡ ಗೆಲ್ಲುತ್ತಾನೆ. ಹೊಂದಾಣಿಕೆಯ ಮಾತುಕತೆಯ ಬಳಿಕ ಎಲ್ಲಿ ಮತ್ತು ಯಾರು ಸ್ಪರ್ಧೆ ಮಾಡಬೇಕು ಎನ್ನುವ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















