ಕಲ್ಪ ಮೀಡಿಯಾ ಹೌಸ್ | ಯಶವಂತಪುರ/ಶಿವಮೊಗ್ಗ |
ಸಂಪಿಗೆ ರೋಡ್ ಮತ್ತು ಮಲ್ಲೇಶ್ವರಂ #Malleshwaram ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ ಕುರಿತಾಗಿ ರೈಲ್ವೆ ಇಲಾಖೆ ಮಹತ್ವದ ಅಪ್ಡೇಟ್ ನೀಡಿದೆ.
Also Read>> ರಾಷ್ಟ್ರ ಕಟ್ಟುವಲ್ಲಿ ವಕೀಲರ ಪಾತ್ರ ಮಹತ್ವದ್ದು: ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ
ಈ ಕುರಿತಂತೆ ನೈಋತ್ಯ ರೈಲ್ವೆ #SouthWesternRailway ಇಲಾಖೆ ಪ್ರಕಟಣೆ ಹೊರಡಿಸಿದ್ದು, ಚಿಕ್ಕಮಗಳೂರು-ಯಶವಂತಪುರ ಹಾಗೂ ತಾಳಗುಪ್ಪ-ಮೈಸೂರು #Mysore ನಡುವಿನ ಎರಡು ರೈಲುಗಳ ನಿಲುಗಡೆ ಕುರಿತಾಗಿ ಮಾಹಿತಿ ನೀಡಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಸಂಪಿಗೆ ರೋಡ್ ಮತ್ತು ಮಲ್ಲೇಶ್ವರಂ ನಿಲ್ದಾಣಗಳಲ್ಲಿ ಕೆಲವು ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಲು ನೈಋತ್ಯ ರೈಲ್ವೆಯು ನಿರ್ಧರಿಸಿದೆ. ಈ ನಿಲುಗಡೆಗಳು 2025ರ ಏಪ್ರಿಲ್ 1ರಿಂದ ಜೂನ್ 30ರವರೆಗೆ ಮೂರು ತಿಂಗಳ ಅವಧಿಗೆ ಮುಂದುವರಿಯಲಿವೆ ಎಂದು ತಿಳಿಸಿದೆ.
1. ರೈಲು ಸಂಖ್ಯೆ 16239/16240 #Chikkamagaluru ಚಿಕ್ಕಮಗಳೂರು #Yashwanatapur ಯಶವಂತಪುರ-ಚಿಕ್ಕಮಗಳೂರು ಡೈಲಿ ಎಕ್ಸ್’ಪ್ರೆಸ್ ರೈಲು ಏಪ್ರಿಲ್ 1ರಿಂದ ಜೂನ್ 30ರವರೆಗೆ ಸಂಪಿಗೆ ರೋಡ್ ನಿಲ್ದಾಣದಲ್ಲಿ ನಿಲುಗಡೆ ಮುಂದುವರೆಸಲಿದೆ.
2. ರೈಲು ಸಂಖ್ಯೆ 16228 #Talaguppa ತಾಳಗುಪ್ಪ-ಮೈಸೂರು ಡೈಲಿ ಎಕ್ಸ್’ಪ್ರೆಸ್ ರೈಲು ಏಪ್ರಿಲ್ 1ರಿಂದ ಜೂನ್ 30ರವರೆಗೆ ಮಲ್ಲೇಶ್ವರಂ ನಿಲ್ದಾಣದಲ್ಲಿ ನಿಲುಗಡೆ ಮುಂದುವರೆಸಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post