ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಕಾರಿ ಸಂದೇಶ ಅಥವಾ ಹೇಳಿಕೆಗಳನ್ನು ಹಾಕಿದಲ್ಲಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಈ ಕುರಿತಂತೆ ಸಾರ್ವಜನಿಕ ತಿಳುವಳಿಕೆ ಬಿಡುಗಡೆ ಮಾಡಿರುವ ಜಿಲ್ಲಾ ಪೊಲೀಸ್ ಇಲಾಖೆ, ಫೇಸ್’ಬುಕ್, ವಾಟ್ಸಪ್, ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಸುವ್ಯವಸ್ಥೆಗೆ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಹಾಗೂ ಪರಸ್ಪರ ಗುಂಪಿನ ನಡುವೆ ದ್ವೇಶ ಭಾವನೆ ಬರುವಂತಹ ಪ್ರಚೋದನಾಕಾರಿ ಹೇಳಿಕೆ (ಪೋಸ್ಟ್) ಗಳನ್ನು ಹಾಕುವವರ / ಫಾರ್ವರ್ಡ್ ಮಾಡುವವರ ವಿರುದ್ಧ ಕಾನೂನು ರೀತ್ಯಾ ಸೂಕ್ತ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಈ ಬಗ್ಗೆ ವಾಟ್ಸಪ್ ಗ್ರೂಪ್ ಅಡ್ಮಿನ್’ಗಳು, ಬಳಕೆದಾರರು ಹಾಗೂ ಸಂದೇಶಗಳನ್ನು ಫಾರ್ವರ್ಡ್ ಮಾಡುವವರು ಸೂಕ್ತ ಎಚ್ಚರಿಕೆಯನ್ನು ವಹಿಸುವುದು ಹಾಗೂ ವಾಟ್ಸಪ್ ಗ್ರೂಪ್ ಅಡ್ಮಿನ್’ಗಳು ತಮ್ಮ ಗುಂಪಿನ ಸದಸ್ಯರಿಗೆ ಸೂಕ್ತ ತಿಳುವಳಿಕೆ ನೀಡಬೇಕು ಎಂದು ಸೂಚನೆ ನೀಡಲಾಗಿದೆ.
Get in Touch With Us info@kalpa.news Whatsapp: 9481252093

















