ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಲೋಕಸಭಾ ಚುನಾವಣೆಗೆ #LoksabhaElection2024 ರಾಜ್ಯದಲ್ಲಿ ನಡೆಯಲಿರುವ ಎರಡು ಹಂತದ ಮತದಾನದ ದಿನ ಸಿಬ್ಬಂದಿಗಳಿಗೆ ಮತದಾನ ಮಾಡಲು ಕಡ್ಡಾಯ ರಜೆ ನೀಡದೇ ಇದ್ದರೆ ಅಂತಹ ಕಂಪನಿಗಳ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಎಚ್ಚರಿಕೆ ನೀಡಿದ್ದಾರೆ.
ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡೂ ದಿನ ಸರ್ಕಾರ ರಜೆ ಘೋಷಣೆ ಮಾಡಲಾಗಿದೆ. ಈ ಎರಡು ದಿನದಂದು ರಜೆ ನೀಡದ ಕಂಪನಿಗಳ ವಿರುದ್ಧ ಕಾರ್ಮಿಕ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ನಾವು ಐಟಿ #IT ವಲಯ ಸೇರಿದಂತೆ ಖಾಸಗಿ ಕಂಪನಿಗಳನ್ನು ಸಂಪರ್ಕ ಮಾಡಿದ್ದು, ಅಲ್ಲಿನ ಸಿಇಒ ಮತ್ತು ಮ್ಯಾನೇಜ್’ಮೆಂಟ್’ಗಳನ್ನು ಭೇಟಿಯಾಗಿ ಮತ ಚಲಾಯಿಸಲು ಸಿಬ್ಬಂದಿಗೆ ಉತ್ತೇಜಿಸುವಂತೆ ಹೇಳಿದ್ದೇವೆ ಎಂದರು.
ಖಾಸಗಿ ಕಂಪನಿಗಳ ಮಾಲಿಕರನ್ನು ಭೇಟಿ ಮಾಡಿ ಮತದಾನ ಮಾಡುವಂತೆ ಸಿಬ್ಬಂದಿಗಳಿಗೆ ಉತ್ತೇಜಿಸಬೇಕು. ಸಾಧ್ಯವಾದರೆ ಅವರಿಗೆ ಮತಗಟ್ಟೆಗಳಿಗೆ ತೆರಳಲು ವಾಹನದ ವ್ಯವಸ್ಥೆ ಮಾಡಿ ಎಂದು ಮನವಿ ಮಾಡಿದ್ದೇವೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post