ಕಲ್ಪ ಮೀಡಿಯಾ ಹೌಸ್ | ಹೊಸನಗರ |
ಹೊಸನಗರ #Hosanagar ತಾಲೂಕಿನ ಹುಂಚ ಸಮೀಪದ ಕಡಸೂರು ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿರುವ ವಿಡಿಯೋವೊಂದು ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.
ಡೈರಿಗೆ ಹಾಲು ಹಾಕಲು ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಈ ವೇಳೆ ಚಿರತೆ ಪ್ರತ್ಯಕ್ಷವಾಗಿದ್ದು, ಮೊಬೈಲ್‌ನಲ್ಲಿ ವಿಡಿಯೋ ಮಾಡಿ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
Also Read>> ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
ಈಗಾಗಲೇ ಮೇಯಲು ಬಿಟ್ಟ ಸಾಕಷ್ಟು ಜಾನುವಾರುಗಳನ್ನು ಚಿರತೆ ತಿಂದಿರುವ ಬಗ್ಗೆ ಮಾಹಿತಿ ಇದ್ದು ಜಾನುವಾರುಗಳ ಕಳೇಬರಗಳು ಅಲ್ಲಲ್ಲಿ ಕಂಡುಬಂದಿದೆ.
ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಚಿರತೆಯನ್ನು #Leopard ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಕಡಸೂರು ನಿವಾಸಿಗಳು ಆಗ್ರಹಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















